ಜಿಲ್ಲೆಯಲ್ಲಿಂದು ಹೊಸದಾಗಿ 14 ಕೋವಿಡ್ ಪ್ರಕರಣಗಳು ಪತ್ತೆ



ಹಾಸನ.ಮಾ.12(ಕರ್ನಾಟಕವಾರ್ತೆ):-ಜಿಲ್ಲೆಯಲ್ಲಿಂದು ಹೊಸದಾಗಿ 14 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,817 ಏರಿಕೆಯಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ 69 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 28,280 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 468 ಮಂದಿ ಸಾವನ್ನಪ್ಪಿದಾರೆ. 

ಇಂದು ಪತ್ತೆಯಾದ 14ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ 7 ಮಂದಿ, ಅರಸೀಕೆರೆ 2, ಅರಕಲಗೂಡು 2, ಬೇಲೂರು 2, ಹೊಳೆನರಸೀಪುರ ತಾಲ್ಲೂಕಿನಲ್ಲಿ ಒಬ್ಬರಿಗೆ  ಕೋವಿಡ್ ಪ್ರಕರಣಗಳು ದೃಡಪಟ್ಟಿದೆ. ಎಂದು  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ.

Post a Comment

Previous Post Next Post