ಜಿಲ್ಲೆಯಲ್ಲಿಂದು ಹೊಸದಾಗಿ 5 ಕೋವಿಡ್ ಪ್ರಕರಣಗಳು ಪತ್ತೆ

ಹಾಸನ.ಮಾ.10(ಕರ್ನಾಟಕವಾರ್ತೆ):-ಜಿಲ್ಲೆಯಲ್ಲಿಂದು ಹೊಸದಾಗಿ 5 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,798 ಏರಿಕೆಯಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ 61 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 28,269 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 468 ಮಂದಿ ಸಾವನ್ನಪ್ಪಿದಾರೆ. 

ಇಂದು ಪತ್ತೆಯಾದ 5 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ 2 ಮಂದಿ, ಹೊಳೆನರಸೀಪುರ ತಾಲ್ಲೂಕಿನಲ್ಲಿ 2 ಮಂದಿ, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 1 ಮಂದಿ, ಕೋವಿಡ್ ದೃಡಪಟ್ಟಿದೆ ಎಂದು  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ.

Post a Comment

Previous Post Next Post