ಹಾಸನ: ಜಿಲ್ಲೆಯಲ್ಲಿಂದು ಹೊಸದಾಗಿ 56 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 29397 ಏರಿಕೆಯಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ 395 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 28,530 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 11 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲಿಂದು ಕೋವಿಡ್ ನಿಂದ 2 ಸಾವು ಸಂಭವಿಸಿದ್ದು ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 472 ಮಂದಿ ಸಾವನ್ನಪ್ಪಿದ್ದಾರೆ.
ಇಂದು ಪತ್ತೆಯಾದ 56 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ 23 ಮಂದಿ, ಅರಸೀಕೆರೆ ತಾಲ್ಲೂಕಿನಲ್ಲಿ 10 ಮಂದಿ, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 14 ಮಂದಿಗೆ, ಅರಕಲಗೂಡು ತಾಲ್ಲೂಕಿನಲ್ಲಿ 4 ಮಂದಿ, ಬೇಲೂರು, ಆಲೂರು, ಹೊಳೆನರಸೀಪುರ ತಾಲ್ಲೂಕಿನಲ್ಲಿ ತಲಾ ಒಬ್ಬರಿಗೆ ಹಾಗೂ ಇತರ ಜಿಲ್ಲೆಯ ಇಬ್ಬರಿಗೆ ಕೋವಿಡ್ ಪ್ರಕರಣ ದೃಡಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ.
