ಭಾರತದಲ್ಲಿ ಕೊರೋನಾ ಸ್ಫೋಟ: ದೇಶದಲ್ಲಿಂದು 62,714 ಹೊಸ ಕೇಸ್ ಪತ್ತೆ, 312 ಮಂದಿ ಸಾವು.

 ನವದೆಹಲಿ: ಸತತ 18 ದಿನಗಳಿಂದ ಕೊರೋನಾ ವೈರಸ್ ಪ್ರಕರಗಳ ಏರುಗತಿ ಕಾಣುತ್ತಿರುವ ಭಾರತದಲ್ಲಿ ಭಾನುವಾರ ಹೊಸದಾಗಿ 62,714 ಜನರು ಸೋಂಕಿಗೆ ಒಳಗಾಗಿದ್ದು, ಇದು ಕಳೆದ ರ‍್ಷ ಅ.16ರ ನಂತರದ (134 ದಿನಗಳ) ದಾಖಲೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 312 ಮಂದಿ ಸಾವನ್ನಪ್ಪಿದ್ದು, ಇದೂ 3 ತಿಂಗಳ ದಾಖಲೆಯಾಗಿದೆ.


ಇದರೊಂದಿಗೆ ದೇಶದಲ್ಲಿ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 4,86,310ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯಗೊಂಡ 24 ತಾಸಿನ ಅವಧಿಯಲ್ಲಿ 312 ಸೋಂಕಿತರು ಸಾವನ್ನಪ್ಪಿದ್ದು, ಇದೂ ಕೂಡ 3 ತಿಂಗಳ ದಾಖಲೆಯಾಗಿದೆ. ಸಾವಿನಲ್ಲಿ ಮಹಾರಾಷ್ಟ್ರ ಅಗ್ರಸ್ಥಾನಿಯಾಗಿದ್ದು, 112 ಮಂದಿ ಅಸುನೀಗಿದ್ದಾರೆ. ನಂತರದ ಸ್ಥಾನ ಪಂಜಾಬ್ 59, ಛತ್ತೀಸ್ಗಢ 22, ಕೇರಳ 14 ಹಾಗೂ ರ‍್ನಾಟಕದ್ದಾಗಿದೆ.

ಒಂದೇ ದಿನ ಬರೋಬ್ಬರಿ 62,714 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿರುವುದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,19,71,624ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,61,552ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

1,19,71,624 ಮಂದಿ ಒಟ್ಟಾರೆ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 28,739 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 1,13,23762ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,86,310ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಭಾರತದಲ್ಲಿ ಒಂದೇ ದಿನ 11,81,289 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 24,09,50,842 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನರ‍್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿರ‍್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ ಹಿರಿಯ ನಾಗರೀಕರಿಗೆ ಹಾಗೂ ದರ‍್ಘಕಾಲಿಕ ರೋಗದಿಂದ ಬಳಲುತ್ತಿರುವವರಿಗೂ ಲಸಿಕೆ ನೀಡಲಾಗುತ್ತಿದೆ. .

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 6,02,69,782 ದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ರ‍್ಕಾರ ಮಾಹಿತಿ ನೀಡಿದೆ.




Post a Comment

Previous Post Next Post