'ದಂಡಿ ಯಾತ್ರೆ’ಗೆ ಪ್ರಧಾನಿ ಮೋದಿ ಇಂದು ಚಾಲನೆ

ಅಹಮದಾಬಾದ್: ಭಾರತದ 75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಗುಜರಾತ್ ರಾಜ್ಯದ ಅಹಮದಾಬಾದ್ ನಗರದ ಸಬರಮತಿ ಆಶ್ರಮದಿಂದ ದಂಡಿವರೆಗೆ ಇಂದಿನಿಂದ ಪಾದಯಾತ್ರೆ ಕೈಗೊಳ್ಳಲಾಗುತ್ತದೆ.

ಈ ಪಾದಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಲಿದ್ದು, ಈ ಪಾದಯಾತ್ರೆಯು ‘ಆಜಾದಿ ಕಾ ಅಮೃತ್ ಮಹೋತ್ಸವ್’ ಹೆಸರಿನಲ್ಲಿ ಆರಂಭವಾಗಲಿದೆ. ಮಹಾತ್ಮ ಗಾಂಧಿಜಿ ಅವರು 1930ರಲ್ಲಿ ಉಪ್ಪಿನ ಕಾನೂನನ್ನು ಮುರಿಯಲು ಇದೇ ದಿನ ದಂಡಿ ಸತ್ಯಾಗ್ರಹ ಕೈಗೊಂಡಿದ್ದರು.

'ಆಜಾದಿ ಕಾ ಅಮೃತ್ ಮಹೋತ್ಸವ್’ ಹೆಸರಿನ ಈ ಬೃಹತ್ ಪಾದಯಾತ್ರೆಯಲ್ಲಿ 81 ಜನ ಪ್ರಮುಖರು ಭಾಗಿಯಾಗಲಿದ್ದಾರೆ ತಿಳಿದು ಬಂದಿದೆ.

Post a Comment

Previous Post Next Post