ಆಲೂರು : ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಶಿರಿನ್ ತಾಜ್ ತಿಳಿಸಿದರು.
ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ತಾಲ್ಲೂಕು ಆಸ್ಪತ್ರೆ ವತಿಯಿಂದ ಆಯೋಜಿಸಿದ್ದ ಕರೋನ ಮುಂಜಾಗ್ರತಾ ಜಾಗೃತಿ ಅರಿವು ಕಾರ್ಯ ಕ್ರಮದ " ಮಾಸ್ಕ್ ದಿನ " ಕಾರ್ಯಕ್ರಮದ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಕರೋನಾ 2 ನೇ ಅಲೆ ದಿನೇ ದಿನೇ ಹೆಚ್ಚಾಗುತ್ತಿದ್ದು ಸಾರ್ವಜನಿಕರು ಮಾಸ್ಕ್ ಗಳನ್ನು ಧರಿಸದೆ ಓಡಾಡುತ್ತಿದ್ದಾರೆ. ಸರ್ಕಾರ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮಾಸ್ಕ್ ಧರಿಸು ವಂತೆ ತಿಳಿಸಿದರು ಸಹ ಮಾರ್ಗಸೂಚಿಗಳನ್ನು ಅನುಸರಿಸದೇ ಇರುವುದು ಕಂಡು ಬರುತ್ತಿದೆ, ಈ ನಿಟ್ಟಿನಲ್ಲಿ ಸರ್ಕಾರ ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದೇ ಓಡಾಡುವವರಿಗೆ ₹ 100 ದಂಡ ವಿಧಿಸಲಾಗುವುದು ಎಂದರು.
ಹಾಸನದ ಬಿ ಟಿ ಮಾನವ, ಹೊಯ್ಸಳ ಕಲಾ ತಂಡ ದಿಂದ ಗೀತ ಗಾಯನಗಳ ಮೂಲಕ ಜನರಲ್ಲಿ ಕೋವಿಡ್ ಬಗ್ಗೆ ಜಾಗೃತಿ ಅರಿವು ಜಾಥಾ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ತಾ.ಪಂ ಉಪಾಧ್ಯಕ್ಷ ತೋಫಿಕ್, ಸದಸ್ಯ ಅಬ್ದುಲ್ ಖುದ್ದೂಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ,
ಸಿ ಡಿ ಪಿ ಓ ಮಲ್ಲೇಶ್, ಪ.ಪಂ ಮುಖ್ಯಾಧಿಕಾರಿ ಬಸವರಾಜು ಶಿಗ್ಗಾವಿ, ಸಬ್ ಇನ್ ಸ್ಪೆಕ್ಟರ್ ಮಂಜುನಾಥ ನಾಯಕ್, ತಾಲ್ಲೂಕು ಆರೋಗ್ಯ ಪರಿವೀಕ್ಷಕ ಸತೀಶ್ , ಹಿರಿಯ ಆರೋಗ್ಯ ನಿರೀಕ್ಷಕ ಮೋಹನ್, ಎಲ್ ಎಚ್ ವಿ ಗಳಾದ ತಿಮ್ಮಮ್ಮ ,ಭಾಗ್ಯ, ಕಿರಿಯ ಆರೋಗ್ಯ ನಿರೀಕ್ಷಕರಾದ ಮಂಜು,ಮುರುಳಿ, ರಾಜು, ಪ.ಪಂ ಆರೋಗ್ಯ ನಿರೀಕ್ಷಕ ಮಂಜುನಾಥ್ ಸೇರಿದಂತೆ ಇತರರು ಇದ್ದರು.
Tags
ಆಲೂರು
