ಹಾಸನ.ಮಾ.೨೬:-ಜಿಲ್ಲೆಯಲ್ಲಿಂದು ಹೊಸದಾಗಿ ೩೨ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ ೨೯,೨೦೨ ಏರಿಕೆಯಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ೩೧೫ ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ ೨೮,೪೧೮ ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ೮ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-೧೯ ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು ೪೬೯ ಮಂದಿ ಸಾವನ್ನಪ್ಪಿದ್ದಾರೆ.
ಇಂದು ಪತ್ತೆಯಾದ ೩೨ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ ೨೬ಮಂದಿ, ಬೇಲೂರು ೧ ಮಂದಿ, ಅರಸೀಕೆರೆ, ಅರಕಲಗೂಡು, ಚನ್ನರಾಯಪಟ್ಟಣದಲ್ಲಿ ತಲಾ ೧ ಮಂದಿ ಹಾಗೂ ಇತರ ಜಿಲ್ಲೆಯ ೨ ಮಂದಿಗೆ ಕೋವಿಡ್ ಪ್ರಕರಣ ದೃಡಪಟ್ಟಿದೆ. ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ.
Tags
ಹಾಸನ
