ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಕರೊನಾ ಸೋಂಕು ದೃಢ

ಬೆಂಗಳೂರು : ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರಿಗೆ ಕರೊನಾ ಸೋಂಕು ದೃಢಪಟ್ಟಿದೆ . ಇವರ ಪತ್ನಿ ಚನ್ನಮ್ಮ ಅವರಿಗೂ ಕರೊನಾ ಪಾಸಿಟಿವ್ ಬಂದಿದೆ . ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದೇವೇಗೌಡ ದಂಪತಿಯನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ . ಈ ಬಗ್ಗೆ ಟ್ವಿಟ್ ಮೂಲಕ ತಿಳಿಸಿರುವ ದೇವೇಗೌಡ , ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಐಸೋಲೇಶನ್‌ಗೆ ಒಳಗಾಗಿದ್ದೇವೆ . ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಮುಂಜಾಗ್ರತಾ ಕ್ರಮವಾಗಿ ಕರೊನಾ ಟೆಸ್ಟ್ ಮಾಡಿಸಿಕೊಳ್ಳಿ . ನನ್ನ ಆರೋಗ್ಯದ ಕುರಿತು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ .
ವೈದ್ಯಕೀಯ ಮತ್ತು ಆರೋಗ್ಯ ಸಚಿವ ಡಾ . ಕೆ.ಸುಧಾಕರ್ , ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಅವರ ಧರ್ಮಪತ್ನಿಗೆ ಕರೊನಾ ಸೋಂಕು ದೃಢಪಟ್ಟಿರುವ ಸುದ್ದಿ ತಿಳಿಯಿತು . ವೈದ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದು , ಅವರ ಆರೋಗ್ಯದ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯಲಿದ್ದೇನೆ . ಅವರು ಶೀಘ್ರವಾಗಿ ಗುಣಮುಖರಾಗುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ .

Post a Comment

Previous Post Next Post