ಹಾಸನ ಜಿಲ್ಲೆಯಲ್ಲಿಂದು 131 ಜನರಿಗೆ ಕರೋನ ಸೋಂಕು ಪತ್ತೆ

ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 131 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 30315 ಏರಿಕೆಯಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ 896 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 28941 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-೧೯ ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 478 ಮಂದಿ ಸಾವನ್ನಪ್ಪಿದ್ದಾರೆ. 

ಇಂದು ಪತ್ತೆಯಾದ 131 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ  65ಮಂದಿ, ಅರಸೀಕೆರೆ ತಾಲ್ಲೂಕಿನಲ್ಲಿ 20 ಮಂದಿ, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 11 ಮಂದಿಗೆ, ಬೇಲೂರು ತಾಲ್ಲೂಕಿನಲ್ಲಿ 9 ಮಂದಿ,  ಹೊಳೆನರಸೀಪುರ ತಾಲ್ಲೂಕಿನಲ್ಲಿ 7 ಮಂದಿ,s ಆಲೂರು ತಾಲ್ಲೂಕಿನಲ್ಲಿ 3 ಮಂದಿ, ಸಕಲೇಶಪುರ  ತಾಲ್ಲೂಕಿನಲ್ಲಿ 12 ಮಂದಿ ಹಾಗೂ  ಅರಕಲಗೂಡು ತಾಲ್ಲೂಕಿನಲ್ಲಿ 4 ಮಂದಿಗೆ ಕೋವಿಡ್-೧೯ ದೃಡ ಪಟ್ಟಿದೆ ಎಂದು  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ. 

Post a Comment

Previous Post Next Post