ನಾಳೆ ರಾತ್ರಿಯಿಂದ ಕರ್ನಾಟಕದಲ್ಲಿ 14 ದಿನ ಲಾಕ್‍ಡೌನ್

ಬೆಂಗಳೂರು: ಸಂಪುಟ ಸಭೆ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ಕರ್ನಾಟಕದಲ್ಲಿ 14 ದಿನದ ಲಾಕ್‍ಡೌನ್ ಘೋಷಣೆ ಮಾಡಿದರು.

ಇಂದು ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್, ಬಿಬಿಎಂಪಿ ಅಧಿಕಾರಿಗಳು ಲಾಕ್‍ಡೌನ್ ಅನಿವಾರ್ಯ. ಬೆಂಗಳೂರಿನಲ್ಲಿ ಲಾಕ್‍ಡೌನ್ ಆಗದಿದ್ರೆ ಬೆಂಗಳೂರಿನ ಸ್ಥಿತಿ ಕೈ ಮೀರಬಹದು. ತಜ್ಞರು ಸಹ ಲಾಕ್‍ಡೌನ್ ಮಾಡಲು ಸಲಹೆ ನೀಡಿದ್ದಾರೆ ಎಂದು ಸಿಎಂ ಗಮನಕ್ಕೆ ತಂದಿದ್ದರು.

18ರಿಂದ 45 ವರ್ಷದೊಳಗಿನವರಿಗೆ ಸರ್ಕಾರದಿಂದ ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು. ಬೆಳಗ್ಗೆ 6 ರಿಂದ 10 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅನುಮತಿ ನೀಡಲಾಗಿದೆ. ಕೃಷಿ, ಮೆಡಿಕಲ್ ಸೇರಿದಂತೆ ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.

Post a Comment

Previous Post Next Post