ಹಾಸನ: ಎಲ್ಲೆಡೆ ಆವರಿಸಿರುವ ಕೊರೋನಾ ಪಾಸಿಟಿವ್ ಹಾಸನ ಜಿಲ್ಲೆಯಲ್ಲಿ ದಿನೆ ದಿನೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಗುರುವಾರದಂದು ೧೫೫ ಕೋವಿಡ್ ಪ್ರಕರಣ ದಾಖಲಾಗಿದ್ದು, ಯಾರು ಸಾವನಪ್ಪಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, , ಈವರೆಗೆ ೨೨೯೪೨೧ ಮಂದಿ ಗುಣಮುಖರಾಗಿದ್ದಾರೆ. ೧೨೩೨ ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ ೧೬ ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ ಸೋಂಕಿತರ ಸಂಖ್ಯೆ ೩೧೧೩೮ ಕ್ಕೆ ಏರಿಕೆಯಾದರೇ ಮೃತರ ಸಂಖ್ಯೆ ೪೮೫ಕ್ಕೆ ತಲುಪಿದೆ ಎಂದರು.
ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-೨, ಅರಕಲಗೂಡು-೬, ಅರಸೀಕೆರೆ-೩೨, ಬೇಲೂರು-೩, ಚನ್ನರಾಯಪಟ್ಟಣ-೧೩, ಹಾಸನ-೭೦, ಹೊಳೆನರಸೀಪುರ ೪, ಸಕಲೇಶಪುರ ೨೩ ಸೇರಿ ಒಟ್ಟು ೧೫೫ ಪಾಸಿಟಿವ್ ಪ್ರಕರಣ ದಾಖಲಾಗಿದೆ ಎಂದು ಕೊರೋನಾ ಪ್ರಕರಣದ ಬಗ್ಗೆ ಅಂಕಿ-ಅಂಶ ನೀಡಿದರು.
ಕೊರೋನಾ ಸೋಂಕು ಕಡಿಮೆ ಮಾಡಲು ಸರಕಾರದ ನಿಯಮವನ್ನು ಪಾಲಿಸುವುದು ಮುಖ್ಯವಾಗಿದೆ. ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತಾ, ನೆಗಡಿ, ಕೆಮ್ಮು ಏನಾದರೂ ಇದ್ದರೇ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೋನಾ ಸೋಂಕು ತಡೆಗಟ್ಟುವಲ್ಲಿ ಎಲ್ಲಾರು ಸಹಕರಿಸಬೇಕೆಂದು ಮನವಿ ಮಾಡಿದರು.