ಕೊವಿಡ್ ಮಹಾಮಾರಿ ರಾಜ್ಯದಲ್ಲಿ ಮಿತಿಮೀರುತ್ತಿದೆ. ಹೀಗಾಗಿ ಒಂದೂವರೆ ಗಂಟೆ ಕಾಲ ತಜ್ಞರ ಜತೆ ಚರ್ಚಿಸಿದ್ದೇವೆ. ಏಪ್ರಿಲ್ 20ರವರೆಗೆ 8 ನಗರಗಳಲ್ಲಿ ಈಗಿನಂತೆಯೇ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಉಳಿದಂತೆ ಬೇರೆ ಯಾವುದೇ ತೀರ್ಮಾನವನ್ನು ಇಂದು ಕೈಗೊಂಡಿಲ್ಲ. ವಾರದ ಬಳಿಕ ಕುಳಿತು ಮತ್ತೊಮ್ಮೆ ಚರ್ಚೆ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಸಲಹೆಯನ್ನು ಸಹ ಪಡೆಯುತ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕರ್ನಾಟಕದಲ್ಲಿ ಮಿತಿಮೀರಿ ಹೆಚ್ಚುತ್ತಿರುವ ಕೊವಿಡ್ ಸೋಂಕಿನ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ತುರ್ತು ಸಭೆ ಅಂತ್ಯಗೊಂಡಿದೆ. ಸಿಎಂ ಯಡಿಯೂರಪ್ಪ ಕೊವಿಡ್ ನಿಯಂತ್ರಣ ವಿಚಾರವಾಗಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸುವುದು ಬಹುತೇಕ ಖಚಿತಗೊಂಡಿದೆ. ಸಿಎಂ ಯಡಿಯೂರಪ್ಪ ನೇತೃತ್ವದ ತುರ್ತು ಸಭೆಯಲ್ಲಿ ಈ ಕುರಿತು ತಜ್ಞರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿಗಳಿಗೆ ನಗರದಲ್ಲಿ ಪರಿಸ್ಥಿತಿ ಕೈಮೀರಿದ ಬಗ್ಗೆ ತಜ್ಞರು, ಉನ್ನತ ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.