ಹಾಸನ ಏ.22:-ಜಿಲ್ಲೆಯಲ್ಲಿಂದು ಹೊಸದಾಗಿ 663 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 33806 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 3074 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 30220 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ 4 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 512 ಮಂದಿ ಸಾವನ್ನಪ್ಪಿದ್ದಾರೆ.
ಇಂದು ಪತ್ತೆಯಾದ 663 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ 285 ಮಂದಿ, ಅರಕಲಗೂಡು 90 ಮಂದಿ, ಅರಸೀಕೆರೆ 65 ಮಂದಿ, ಹೊಳೆನರಸೀಪುರ 25 ಮಂದಿ, ಚನ್ನರಾಯಪಟ್ಟಣ 101 ಮಂದಿಗೆ, ಸಕಲೇಶಪುರ ತಾಲ್ಲೂಕಿನಲ್ಲಿ 41 ಮಂದಿ, ಆಲೂರು 15 ಮಂದಿ, ಬೇಲೂರು 38 ಮಂದಿಗೆ, ಇತರೆ ಜಿಲ್ಲೆಯಲ್ಲಿ 3 ಮಂದಿಗೆ ಕೋವಿಡ್ ಪ್ರಕರಣ ದೃಡಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ.