ಹಾಸನದಲ್ಲಿಂದು 758 ಕರೋನ ಪಾಸಿಟಿವ್ ಪತ್ತೆ ಹಾಗೂ 4 ಜನ ಸಾವನ್ನಪ್ಪಿದರೆ

ಹಾಸನ ಏ.24:-ಜಿಲ್ಲೆಯಲ್ಲಿಂದು ಹೊಸದಾಗಿ 758 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 35622 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 3836 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 30655 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 64 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ 4ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 526 ಮಂದಿ ಸಾವನ್ನಪ್ಪಿದ್ದಾರೆ. 

ಇಂದು ಪತ್ತೆಯಾದ 526 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ 239 ಮಂದಿ, ಅರಕಲಗೂಡು 64 ಮಂದಿ, ಅರಸೀಕೆರೆ 122 ಮಂದಿ, ಹೊಳೆನರಸೀಪುರ 47 ಮಂದಿ, ಚನ್ನರಾಯಪಟ್ಟಣ 140 ಮಂದಿಗೆ, ಸಕಲೇಶಪುರ ತಾಲ್ಲೂಕಿನಲ್ಲಿ 18 ಮಂದಿ, ಆಲೂರು 26 ಮಂದಿ, ಬೇಲೂರು 97 ಮಂದಿಗೆ, ಇತರೆ ಜಿಲ್ಲೆಯಲ್ಲಿ 5 ಮಂದಿಗೆ ಕೋವಿಡ್ ಪ್ರಕರಣ ದೃಡಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ

Post a Comment

Previous Post Next Post