ಕುಡಿಯುವ ನೀರು,ಮೇವಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಲು ಸೂಚನೆ

ಹಾಸನ ಏ.೦೯- ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸುವಂತೆ ಜಿಲ್ಲಾ ಪಂಚಾಯಿತಿ  ಅಧ್ಯಕ್ಷರಾದ ಶ್ವೇತಾ ದೇವರಾಜ್‌ಅವರು  ತಿಳಿಸಿದ್ದಾರೆ.



ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿAದು ೨೦೨೦- ೨೧ ನೇ ಸಾಲಿನ  ಮೊದಲ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೃಷಿಗೆ ಪೂರಕವಾಗಿ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು  ಈಗಲೇ ದಾಸ್ತಾನು  ಮಾಡುವಂತೆ ತಿಳಿಸಿದರು.

       ಕೃಷಿ ಹಾಗೂ ತೋಟಗಾರಿಕಾ ಇಲಾಖೆ ಮೂಲಕ ರೈತರಿಗೆ ದೊರೆಯುವ ಸರ್ಕಾರದ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸುವುದರ ಜೊತೆಗೆ ಬೆಳೆಗಳ ಬಗ್ಗೆ ಅರಿವನ್ನು ಮೂಡಿಸಿ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್ ೧೯ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಆಸ್ಪತ್ರೆಗಳಲ್ಲಿ ಲಸಿಕಾ ಕಾರ್ಯ ಚುರುಕುಗೊಳಸಿ ೪೫ ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ದೊರೆಯುವಂತಾಗಬೇಕು ಹಾಗೆಯೇ ಆಸ್ಪತ್ರೆಗಳಲ್ಲಿ ಇರುವ ಚಿಕಿತ್ಸೆ ಸೌಲಭ್ಯ  ವೃದ್ಧಿಯಾಗಬೇಕು ಎಂದು ತಿಳಿಸಿದರು.

      ಕೋವಿಡ್-೧೯ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ಪಾಠಪ್ರವಚನ ಸಮರ್ಪಕವಾಗಿ ನಡೆಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸಾಧ್ಯವಾದಷ್ಟು  ಪರೀಕ್ಷೆಗೆ ತಯಾರಿ ನಡೆಸುವಂತೆ ತಿಳಿಸಿದರು  

 ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ  ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮಗಳಲ್ಲಿ ಜಲಾನಯನ ಪ್ರದೇಶಗಳ ಅಭಿವೃದ್ಧಿ ಹಾಗೂ ಇತರೆ  ಅಬಿವೃದ್ದಿ ಕಾರ್ಯಗಳನ್ನು ಪೂರ್ಣಗೊಳಿಸುವಂತೆ  ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವವಣಕಧಿಕಾರಿಗಳಿಗೆ ತಿಳಿಸಿದರು. 

     ಜಿಲ್ಲೆಗೆ ದೀನ ದಯಾಳ್ ಉಪಾಧ್ಯಾಯ ಪ್ರಶಸ್ತಿ  ಲಭಿಸಿದ್ದು ಅಧಿಕಾರಿಗಳ ಉತ್ತಮ ಕೆಲಸ ಹಾಗೂ ಶ್ರಮದಿಂದ ಲಭಿಸಿದೆ  ಈ ನಿಟ್ಟಿನಲ್ಲಿ  ಆಧಿಕಾರಿಗಳಿಗೆ  ಶುಭಕೋರಿ ಪ್ರಶಂಸೆ ವ್ಯಕ್ತಪಡಿಸಿದರು  ಇದೇ ರೀತಿ  ಜಿಲ್ಲೆಗೆ ಇನ್ನೂ ಹೆಚ್ಚಿನ ಪ್ರಶಸ್ತಿಗಳನ್ನು ಪಡೆಯಲು ಕಾರ್ಯ ನಿರ್ವಹಿಸುವಂತೆ ತಿಳಿಸಿದರು

     ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ ಪರಮೇಶ್ ಅವರು ಮಾತನಾಡಿ ಜಿಲ್ಲೆಯ ಯಾವುದೇ ಒಂದು  ಗ್ರಾಮಗಳಿಗೆ  ಸಹ ಕುಡಿಯುವ ನೀರಿನ ತೊಂದರೆಯಾಗದAತೆ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

     ಸಭೆಯಲ್ಲಿ ಉಪ ಕಾರ್ಯದರ್ಶಿಗಳಾದ ಚಂದ್ರಶೇಖರ್, ಮಹೇಶ್ ಹಾಗೂ ಮುಖ್ಯ ಯೋಜನಾಧಿಕಾರಿ ನಾಗರಾಜ್ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.


Post a Comment

Previous Post Next Post