ಹಾಸನದ ಪತ್ರಕರ್ತರಿಗೆ ಕೊರೋನಾ ಲಸಿಕೆ.

ಹಾಸನ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಇದೆ ಮೊದಲ ಬಾರಿಗೆ ೪೫ ವರ್ಷ ಮೇಲ್ಪಟ್ಟ ಪತ್ರಕರ್ತರು ಕೊರೋನಾ ಲಸಿಕೆ ಹಾಕಿಸಿಕೊಂಡರು.




       ಮೊದಲಿಗೆ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಸ್.ಆರ್. ಪ್ರಸನ್ನಕುಮಾರ್ ರವರು ತಾವೆ ಲಸಿಕೆ ಹಾಕಿಸಿಕೊಳ್ಳುವುದರ ಮೂಲಕ ಉಳಿದ ಪತ್ರಕರ್ತರಿಗೆ ಸ್ಪೂರ್ತಿ ತುಂಬಿದರು. ಮೇ.೧ರ ನಂತರ ಪತ್ರಕರ್ತರ ಕುಟುಂಬ ಸದಸ್ಯರಿಗೆ ಲಸಿಕೆ ಹಾಕಿಸುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕೆ.ಎಂ. ಸತೀಶ್ ತಿಳಿಸಿದರು.

      ಇದೆ ವೇಳೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜಿ. ಸುರೇಶ್, ಉಫಾಧ್ಯಕ್ಷ ಹಿಂದು ಪ್ರಕಾಶ್, ನಗರ ಕಾರ್ಯದರ್ಶಿ ಸಿ.ಬಿ. ಸಂತೋಷ್ ಇತರರು ಉಪಸ್ಥಿತರಿದ್ದರು.


Post a Comment

Previous Post Next Post