ಮಾರ್ಗಸೂಚಿ ಜಾರಿ ವಿಷಯದಲ್ಲಿ ಯಾವುದೇ ರಾಜಿಯಿಲ್ಲ- ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವಂತ ನೂತನ ಮಾರ್ಗಸೂಚಿ ಕ್ರಮಗಳು ಏಕಾಏಕಿ ಜಾರಿಗೆ ತಂದಿಲ್ಲ, ನಿಯಮ ಜಾರಿ ವಿಷಯದಲ್ಲಿ ಯಾವುದೇ ರಾಜಿಯೂ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ 2ನೇ ಅಲೆ ಜೋರಾಗಿದೆ. ಇಂತಹ ಸಂದರ್ಭದಲ್ಲಿ ಪರಿಸ್ಥಿತಿ ಕೈಮೀರಿ ಹೋಗದಂತೆ ಕ್ರಮ ಕೈಗೊಳ್ಳು, ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಗೈಡ್ ಲೈನ್ಸ್ ಜಾರಿ ವಿಷಯದಲ್ಲಿ ಯಾವುದೆ ರಾಜಿ ಇಲ್ಲ. ಇದು ಏಕಾಏಕಿ ಮಾಡಿದ ನಿಯಮ ಅಲ್ಲ ಎಂದರು.

ಇನ್ನೆರಡು ತಿಂಗಳು ಕೊರೋನಾ ಆರ್ಭಟ ಇರಲಿದೆ ಎಂಬುದಾಗಿ ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ. ಇದರಿಂದಾಗಿ ಪರಿಸ್ಥಿತಿ ಕೈ ಮೀರಬಾರದೆಂದು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅಳೆದು ತೂಗಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

Post a Comment

Previous Post Next Post