ಪೋಷಕರ ಮೇಲೆ ಒತ್ತಡ ಹೇರಿ ಅಪಹರಣದ ದೂರು

ಬೆಂಗಳೂರು: ನನ್ನ ಪೋಷಕರು ಮೇಲೆ ಒತ್ತಡ ಹೇರಿ ಅಪಹರಣದ ದೂರು ದಾಖಲಿಸಲಾಗಿದ್ದು, ತಾನು ಎಲ್ಲಿಯೂ ಹೋಗಿರಲಿಲ್ಲ. ಜೀವ ಬೆದರಿಕೆ ಇದ್ದ ಕಾರಣಕ್ಕೆ ಸ್ನೇಹಿತರೊಂದಿಗೆ ಹೊರ ರಾಜ್ಯದಲ್ಲಿ ತಂಗಿದ್ದೆ ಎಂದು ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದ ಸಂತ್ರಸ್ತೆ ನ್ಯಾಯಾಲಯದೆದುರು ಸ್ವಯಂ ಹೇಳಿಕೆ ದಾಖಲಿಸಿದ್ದಾಳೆ.


ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದ ಸಂಬಂಧ ವಿಶೇಷ ತನಿಖಾ ದಳದೆದುರು ಹಾಜರಾಗಿ ತನ್ನ ಹೇಳಿಕೆ ದಾಖಲಿಸಿದ ಸಂತ್ರಸ್ತೆ, ನಾನು ಸುರಕ್ಷಿತವಾಗಿದ್ದೆ. ಎರಡು ಮೂರು ಬಾರಿ ಪೋಷಕರ ಜೊತೆಯೂ ಮಾತನಾಡಿದ್ದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾಳೆ.

ಇದಕ್ಕೂ ಮುನ್ನ ಸಂತ್ರಸ್ತೆಯ ಪೋಷಕರು ತಮ್ಮ ಮಗಳ ಅಪಹರಣವಾಗಿದೆ ಎಂದು ಬೆಳಗಾವಿಯಲ್ಲಿ ಪ್ರಕರಣ ದಾಖಲಿಸಿದ್ದರು. ಬೆಳಗಾವಿಯ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿತ್ತು. ನಂತರ ಸೆಕ್ಸ್ ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಪ್ರಕರಣ ಹಸ್ತಾಂತರವಾಗಿತ್ತು.

ಸಂತ್ರಸ್ತೆಯಿಂದ 164 ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ತನಿಖಾಧಿಕಾರಿ ನಾಗರಾಜ್ ನ್ಯಾಯಾಲಯದ ಅನುಮತಿ ಕೋರಿದ್ದರು. ಈ ಕೋರಿಕೆಯನ್ನು ನ್ಯಾಯಾಲಯ ಮನ್ನಿಸಿದ್ದರಿಂದ ನಿನ್ನೆ ಮಧ್ಯಾಹ್ನ 3.30ಕ್ಕೆ ಸಂತ್ರಸ್ತೆಯನ್ನು ಗುರುನಾನಕ್ ಭವನದಲ್ಲಿರುವ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.

Post a Comment

Previous Post Next Post