ಇಂದು ಹಸೆಮಣೆ ಏರಬೇಕಿದ್ದ ಯುವಕ ಮಹಾಮಾರಿ ಕರೊನಾ ಸೋಂಕಿಗೆ ಬಲಿ

ಚಿಕ್ಕಮಗಳೂರು: ಇಂದು ಹಸೆಮಣೆ ಏರಬೇಕಿದ್ದ ಯುವಕ ಮಹಾಮಾರಿ ಕರೊನಾ ಸೋಂಕಿಗೆ ಬಲಿಯಾಗಿರುವ ಘಟನೆ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ.


ಪೃಥ್ವಿರಾಜ್ (32) ಮೃತ ಯುವಕ. ಈತ ಇಂದು ವೈವಾಹಿಕ ಜೀವನಕ್ಕೆ ಕಾಲಿಡಬೇಕಿತ್ತು. ಆದರೆ, ಮಂಗಳವಾದ್ಯ ಮೊಳಗಬೇಕಿದ್ದ ಮನೆ ಶೋಕ ಸಾಗರದಲ್ಲಿ ಮುಳುಗಿದೆ. ಇಡೀ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನವೇ ತುಂಬಿದೆ.

ಪೃಥ್ವಿರಾಜ್​, ಹತ್ತು ದಿನಗಳ ಹಿಂದಷ್ಟೇ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಮರಳಿದ್ದ. ಆರೋಗ್ಯದಲ್ಲಿ ಏರುಪೇರು ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪೃಥ್ವಿರಾಜ್​ ಮೃತಪಟ್ಟಿದ್ದಾರೆ.

Post a Comment

Previous Post Next Post