ಹಾಸನ ಏ.೦೬:-ಜಿಲ್ಲೆಯಲ್ಲಿಂದು ಹೊಸದಾಗಿ ೧೦೪ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ ೨೯,೯೭೯ ಏರಿಕೆಯಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ೭೧೬ ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ ೨೮,೭೮೭ ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ೯ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-೧೯ ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು ೪೭೬ ಮಂದಿ ಸಾವನ್ನಪ್ಪಿದ್ದಾರೆ.
ಇಂದು ಪತ್ತೆಯಾದ ೧೦೪ ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ ೩೭ ಮಂದಿ, ಅರಸೀಕೆರೆ ತಾಲ್ಲೂಕಿನಲ್ಲಿ ೮ ಮಂದಿ, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ೨೧ ಮಂದಿಗೆ, ಬೇಲೂರು ತಾಲ್ಲೂಕಿನಲ್ಲಿ ೧೪ ಮಂದಿ, ಹೊಳೆನರಸೀಪುರ ತಾಲ್ಲೂಕಿನಲ್ಲಿ ೧೫ ಮಂದಿ,s ಆಲೂರು ತಾಲ್ಲೂಕಿನಲ್ಲಿ ೧ ಮಂದಿ, ಸಕಲೇಶಪುರ ತಾಲ್ಲೂಕಿನಲ್ಲಿ ೪ ಮಂದಿ ಹಾಗೂ ಅರಕಲಗೂಡು ತಾಲ್ಲೂಕಿನಲ್ಲಿ ೪ ಮಂದಿಗೆ ಕೋವಿಡ್-೧೯ ದೃಡ ಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ.