ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದಿಗೆ ತಡೆನೀಡಿದ ಪಾಕ್ ಸರ್ಕಾರ

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಕುರಿತು ತಮ್ಮ ಸಚಿವ ಸಂಪುಟದ ಜತೆ ಸಮಾಲೋಚನೆ ನಡೆಸಿದ ನಂತರ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ದೇಶದ ವಿವಿಧ ವಲಯಗಳನ್ನು ಆರ್ಥಿಕ ಪುನರುತ್ಥಾನ ಕೈಗೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ದೀರ್ಘ ಸಮಾಲೋಚನೆ ನಡೆಸಿದ ಇಮ್ರಾನ್ ಖಾನ್, ಅಗತ್ಯ ವಸ್ತುಗಳನ್ನು ಕಡಿಮೆ ಬೆಲೆಗೆ ಆಮದು ಮಾಡಿಕೊಳ್ಳುವ ಚಿಂತನೆ ನಡೆಸಿದ್ದಾರೆ ಎಂದು ದಿ ಡಾನ್ ಪತ್ರಿಕೆ ವರದಿ ಮಾಡಿದೆ.

ಇಸ್ಲಾಮಾಬಾದ್, ಏ. 05: ಸದ್ಯ ಎರಡೂ ದೇಶಗಳ ನಡುವೆ ಇರುವ ಪರಿಸ್ಥಿತಿಯಲ್ಲಿ ಭಾರತದ ಜತೆ ಯಾವುದೇ ವ್ಯಾಪಾರ-ವಹಿವಾಟು ನಡೆಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಕುರಿತು ತಮ್ಮ ಸಚಿವ ಸಂಪುಟದ ಜತೆ ಸಮಾಲೋಚನೆ ನಡೆಸಿದ ನಂತರ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ದೇಶದ ವಿವಿಧ ವಲಯಗಳನ್ನು ಆರ್ಥಿಕ ಪುನರುತ್ಥಾನ ಕೈಗೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ದೀರ್ಘ ಸಮಾಲೋಚನೆ ನಡೆಸಿದ ಇಮ್ರಾನ್ ಖಾನ್, ಅಗತ್ಯ ವಸ್ತುಗಳನ್ನು ಕಡಿಮೆ ಬೆಲೆಗೆ ಆಮದು ಮಾಡಿಕೊಳ್ಳುವ ಚಿಂತನೆ ನಡೆಸಿದ್ದಾರೆ ಎಂದು ದಿ ಡಾನ್ ಪತ್ರಿಕೆ ವರದಿ ಮಾಡಿದೆ.


ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮ್ಮದ್ ಖುರೇಶಿ, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಭಾರತ ರದ್ದುಗೊಳಿಸಿದೆ. ಭಾರತ ತನ್ನ ಈ ಕ್ರಮವನ್ನು ರದ್ದುಗೊಳಿಸುವವರೆಗೂ ಭಾರತದ ಜತೆಗಿನ ವ್ಯಾಪಾರ ಮತ್ತು ವಹಿವಾಟು ನಡೆಸುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Post a Comment

Previous Post Next Post