© ಹಾಸನ ಸೀಮೆ ನ್ಯೂಸ್
ಹಾಸನ ಏ.೨೯:- ಜಿಲ್ಲೆಯ ಆಸ್ಪತ್ರೆಗಳಲ್ಲಿನ ಖಾಲಿ ಇರುವ ಹುದ್ದೆ ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ತಾತ್ಕಲಿಕ ಸಿಬ್ಬಂದಿಗಳನ್ನು ತುರ್ತಾಗಿ ನೇಮಕ ಮಾಡಿ ಅಗತ್ಯ ಸೇವೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಒದಗಿಸುವಂತೆ ನಿರ್ದೇಶನ ನಿಡ¯ Áಗಿದೆ ಎಂದು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿAದು ಮಾಜಿ ಸಚಿವರಾದ ಸಿ.ಟಿ. ರವಿ ಅವರ ಉಪಸ್ಥಿತಿಯಲ್ಲಿ ಕೋವಿಡ್- ೧೯ ನಿಯಂತ್ರಣ ಕುರಿತು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಸಚಿವರು ತಾಲ್ಲೂಕುವಾರು ಇರುವ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಜನಪ್ರತಿನಿಧಿಗಳಿಂದ ಅಭಿಪ್ರಾಯ ಆಲಿಸಿ ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆ ನೀಡಿದರು.
ಶಾಸಕರಾದ ಕೆ.ಎಂ ಶಿವಲಿಂಗೆಗೌಡ, ಹೆಚ್.ಕೆ. ಕುಮಾರಸ್ವಾಮಿ, ಸಿ.ಎನ್ ಬಾಲಕೃಷ್ಣ, ಕೆ.ಎಸ್ ಲಿಂಗೇಶ್, ವಿಧಾನ ಪರಿಷತ್ ಸದಸ್ಯರಾದ ಎಂ.ಎ.ಗೋಪಾಲಸ್ವಾಮಿ, ತಾಲ್ಲೂಕು ಆಸ್ಪತ್ರೆಗಳಲ್ಲಿರುವ ಸಿಬ್ಬಂದಿಗಳ ಕೊರತೆ, ಖಾಸಗಿ ಆಸ್ಪತ್ರೆಗಲ್ಲಿ ರೆಮ್ ಡಿಸಿವರ್ ಚುಚ್ಚು ಮದ್ದಿನ ಕೊರತೆ, ಲಸಿಕೆ ಕೊರತೆಗಳನ್ನು ತುರ್ತಾಗಿ ಬಗೆಹರಿಸುವಂತೆ ಹಾಗೂ ತಾಲ್ಲೂಕು ಆಸ್ಪತ್ರೆಗಳಗೂ ಒಂದಿಷ್ಟು ಅನುದಾನ ಒದಗಿಸುವಂತೆ ಮನವಿ ಮಾಡಿದರು.
ಮಾಜಿ ಸಚಿವರಾದ ಸಿ.ಟಿ ರವಿ ಅವರು ಮಾತನಾಡಿ ಈ ಬಾರಿ ಸೋಂಕು ಹರಡುವ ವೇಗ ಹೆಚ್ಚಾಗಿದ್ದು ಹೆಚ್ಚಿನ ಕಾಳಜಿವಹಿಸಿ ಅಗತ್ಯವಿರುವವರನ್ನು ಆಸ್ಪತ್ರೆಗೆ ದಾಖಲಿಸಿ ನಿಗಾವಹಿಸಬೇಕಿದೆ ಉಳಿದವರಿಗೆ ಮನೆಗಳಲ್ಲಿಯೇ ಔಷಧಿ ಒದಗಿಸಿ ನಿತರಂತರ ನಿಗಾವಹಿಸುವ ಅಗತ್ಯವಿದೆ ಎಂದರು.
ಶಾಸಕರಾದ ಹೆಚ್,ಕೆ ಕುಮಾರಸ್ವಾಮಿ ಅವರು ಮಾತನಾಡಿ ಲಾಕ್ ಡೌನ್ ಅವಧಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ದಿನ ಬಿಟ್ಟು ದಿನ ಅವಕಾಶ ನೀಡುವುದರಿಂದ ಪ್ರತಿದಿನದ ಜನಸಂದಣಿ ತಡೆಗಟ್ಟಲು ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು.
ಶಾಸಕರಾದ ಕೆ.ಎಂ ಶಿವಲಿಂಗೆಗೌಡ ಮಾತನಾಡಿ ಅರಸೀಕರೆ ತಾಲ್ಲೂಕು ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇದ್ದು ಇದರ ನಿರ್ವಹಣೆಗೆ ಸಿಬ್ಬಂದಿ ಹಾಗೂ ಅಂಬ್ಯುಲೆನ್ಸ್ ಚಾಲಕರನ್ನು ತ್ವರಿತವಾಗಿ ನೇಮಕ ಮಾಡಿ ಕಾರ್ಯಗತಗೊಳಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ವಿವಿಧ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚುತ್ತಿದ್ದು ಇದನ್ನು ಬಗೆಹರಿಸುವಂತೆ ಶಾಸಕರಾದ ಕೆ.ಎಂ ಶಿವಲಿಂಗೆಗೌಡ, ಸಿ.ಎನ್ ಬಾಲಕೃಷ್ಣ, ಕೆ.ಎಸ್ ಲಿಂಗೇಶ್, ಎಂ.ಎ.ಗೋಪಾಲಸ್ವಾಮಿ ಗಮನ ಸೆಳೆದರು.
ಶಾಸಕರಾದ ಸಿ.ಎನ್ ಬಾಲಕೃಷ್ಣ ಅವರು ಮಾತನಾಡಿ ತಾಲ್ಲೂಕು ಆಸ್ಪತ್ರೆಗಳಲ್ಲಿ ಲಸಿಕೆ ಹಾಕುವುದು ಹಾಗೂ ಕೋವಿಡ್ ಆರ್.ಪಿ.ಟಿ.ಸಿ.ಆರ್. ಪರೀಕ್ಷೆಗಳನ್ನು ಒಂದೇ ಭಾಗದಲ್ಲಿ ಮಾಡುತ್ತಿದ್ದು ಇದರಿಂದ ಆರೋಗ್ಯವಂತರಿಗೂ ಸೊಂಕು ಹರಡುವ ಸಾಧ್ಯತೆ ಇದೆ ಹಾಗಾಗಿ ತಾಲ್ಲೂಕು ಹಾಗೂ ಸಮುದಾಯ ಆಸ್ಪತ್ರೆ ಕೇಂದ್ರಗಳ ಬದಲು ಪಕ್ಕದ ಶಾಲಾ ಕಟ್ಟಡಗಳಲ್ಲಿ ಲಸಿಕೆ ಹಾಕುವ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿದರು. ಇದಕ್ಕೆ ಸಹಮತ ವ್ಯಕ್ತ ಪಡಿಸಿದ ಸಚಿವರು ಸೂಕ್ತ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಸಕರಾದ ಸಿ.ಎನ್ ಬಾಲಕೃಷ್ಣ, ಕೆ.ಎಂ ಶಿವಲಿಂಗೆಗೌಡ ಕೆ.ಎಸ್ ಲಿಂಗೇಶ್, ಗೋಪಾಲಸ್ವಾಮಿ ಅವರು ಬೆಂಬಲ ಬೆಲೆಯಡಿ ಜಿಲ್ಲೆಯಿಂದ ಖರೀದಿಸಿದ ರಾಗಿಗೆ ಶೀಘ್ರವಾಗಿ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಇನ್ನೂ ೧೫ -೨೦ ದಿನಗಳಲ್ಲಿ ಹಣ ಬಿಡುಗಡೆಯಾಗಲಿದೆ ಎಂದು ಸಚಿವರಾದ ಕೆ.ಗೋಪಾಲಯ್ಯ ಅವರು ಭರವಸೆ ನೀಡಿದರು.
ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ ಕೋವಿಡ್ ನಿಯಂತ್ರಣ ಕುರಿತು ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆ ನಡೆಸಿ ಈಗಾಗಲೇ ನಿರ್ದೇಶನವನ್ನು ನೀಡಲಾಗಿದ್ದು ಶೆ.೮೦ ಹಾಸಿಗೆಗಳನ್ನು ಮೀಸಲಿರಿಸುವಂತೆ ಸೂಚನೆ ನೀಡಲಾಗಿದೆ ರೆಮ್‌ಡಿಸಿವರ್ ಚುಚ್ಚು ಮದ್ದನ್ನು ಅಗತ್ಯ ಇರುವವರಿಗೆ ಮಾತ್ರ ನೀಡುವಂತೆ ತಿಳಿಸಲಾಗಿದೆ ಎಂದರು.
ರೆಮ್ ಡಿಸಿವರ್ ಚುಚ್ಚು ಮದ್ದು ಅಗತ್ಯವಿವರಿಗೆಮಾತ್ರ ನೀಡಬೇಕು ಇದರ ನಿಯಂತ್ರಣಕ್ಕೆ ವಿಶೇಷ ವೈದ್ಯರ ತಂಡವನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್ ನಂದಿನಿ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಮತ್ತಿತರ ಆಧಿಕಾರಿಗಳು ಹಾಜರಿದ್ದರು.