ಹಾಸನ : ಆರನೇ ವೇತನ ಆಯೋಗದ ಶಿಫಾರಸು ಜಾರಿ ಆಗಲೇಬೇಕು. ಎಸ್ಮಾ ಜಾರಿಗೂ ಬಗ್ಗುವುದಿಲ್ಲ ಎಂದು ಪಟ್ಟು ಹಿಡಿದಿರುವ ಸಾರಿಗೆ ನೌಕರರ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದಂತೆ ಹಾಸನದಲ್ಲೂ ಬೆಳಗ್ಗಿನಿಂದಲೇ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗೆ ಇಳಿಯಲಿಲ್ಲ.
ಸರಕಾರಿ ಬಸ್ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ಹಲವೆಡೆ ಪ್ರಯಾಣಿಕರು ಪರದಾಡುತ್ತಿರುವ ದೃಶ್ಯ ಕಂಡು ಬಂದಿದೆ. ಬಸ್ ನಿಲ್ದಾಣದಲ್ಲಿ ಬಸ್‌ಗಳು ನಿಂತಲ್ಲೇ ನಿಂತಿದ್ದು, ಕೆಲ ಪ್ರಯಾಣಿಕರು ಬಸ್ ಹೊರುಡುವುದನ್ನೇ ನಿರೀಕ್ಷಿಸುತ್ತಿರುವ ದೃಶ್ಯ ಕಂಡು ಬಂದಿದೆ. ಕೆಲ ಕಾರ್ಮಿಕರು ಊರಿಗೆ ತೆರಳಲು ಸಾಧ್ಯವಾಗದೆ ಪರಿತಪಿಸುತ್ತಿದ್ದರೆ, ಬೇರೆ ಊರುಗಳಿಂದ ಬಂದ ಪ್ರಯಾಣಿಕರು ಊರಿಗೆ ತೆರಳಲು ಖಾಸಗಿ ವಾಹನಗಳನ್ನೇ ಅವಲಂಬಿಸಬೇಕಾಗಿದೆ.
ಖಾಸಗಿ ವಾಹನಗಳಲ್ಲಿ ಪ್ರಯಾಣ:
ಸರಕಾರಿ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿರುವುದರಿಂದ ಬೆಳಗ್ಗಿನಿಂದಲೇ ಹಾಸನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿ ಖಾಸಗಿ ಟೂರಿಸ್ಟ್ ವಾಹನಗಳು ಪ್ರಯಾಣಿಕರನ್ನು ಕರೆದೊಯ್ಯುವ ಕೆಲಸ ಮಾಡುತ್ತಿವೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಅರಸೀಕೆರ ಕಡೆಗಳಿಗೆ ಖಾಸಗಿ ಬಸ್‌ಗಳು ಸಂಚಾರ ನಡೆಸುತ್ತಿವೆ. ಟೂರಿಸ್ಟ್ ಕಾರುಗಳು ಬಾಡಿಗೆ ಮಾಡುತ್ತಿದ್ದು, ಪ್ರಯಾಣಿಕರಿಗೆ ಸಹಕಾರ ನೀಡುತ್ತಿವೆ.