ಹಾಸನ ಏ.೨೦:- ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ೨೦೨೦ -೨೧ ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ- ಊಟ, ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ಲೆöÊನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಏಪ್ರಿಲ್ ೨೦ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿತ್ತು.
ಪೋಷಕರು ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳ ಮನವಿಯ ಮೇರೆಗೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಏಪ್ರಿಲ್ ೩೦ಕ್ಕೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪರವಾಗಿ ದೀಪಕ್ ಎ.ಎಸ್ ಹಾಗೂ ಮತ್ತಿತರರು ತಿಳಿಸಿದ್ದಾರೆ.
Tags
ಹಾಸನ
