ಮುಖ್ಯ ನ್ಯಾಯಮೂರ್ತಿಯಾಗಿ ಎನ್ ವಿ ರಮಣ ನೇಮಕ

ನವದೆಹಲಿ: ದೇಶದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಎನ್ ವಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತ ಅಧಿಸೂಚನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಏಪ್ರಿಲ್ 24 ರಂದು ರಮಣ ಅವರು ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.



ಹಾಲಿ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರು ಏಪ್ರಿಲ್ 23ರಂದು ನಿವೃತ್ತರಾಗಲಿದ್ದಾರೆ. ಅವರ ಸ್ಥಾನಕ್ಕೆ ರಮಣ ಅವರನ್ನು ನೇಮಕ ಮಾಡಲಾಗಿದೆ. ಬೊಬ್ಡೆ ಅವರು , ಮುಖ್ಯ ನ್ಯಾಯಮೂರ್ತಿ ಪದವಿಗೆ ರಮಣ ಅವರನ್ನು ಶಿಫಾರಸು ಮಾಡಿದ್ದರು.

ರಮಣ ಅವರು ಮೂಲತ: ಆಂಧ್ರಪ್ರದೇಶದವರಾಗಿದ್ದಾರೆ. ಒಂದು ವರ್ಷ ನಾಲ್ಕು ತಿಂಗಳ ಕಾಲ ಅವರು ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಪದವಿ ಅಲಂಕರಿಸುತ್ತಿರುವ ಆಂಧ್ರಪ್ರದೇಶದ ಎರಡನೆ ವ್ಯಕ್ತಿಯಾಗಿದ್ದಾರೆ ರಮಣ. ಈ ಹಿಂದೆ ಕೆ . ಸುಬ್ಬರಾವ್ ಅವರು ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.

Post a Comment

Previous Post Next Post