ಹಾಸನ ಏ.೦೯ :- ಕರ್ನಾಟಕ ಸಾಹಿತ್ಯ ಅಕಾಡೆಮಿಯು ೨೦೨೧ ರ ಜೂನ್ ತಿಂಗಳಿನಲ್ಲಿ ವಿಶೇಷ ಘಟಕ ಯೋಜನೆಯಡಿ ರಾಜ್ಯ ಮಟ್ಟದ ೫ ದಿನಗಳ “ಮಾಧ್ಯಮ ಪ್ರವೇಶಿಕೆ: ಬರಹ ಮತ್ತು ಸಂವಹನ ಕೌಶಲ” ಕಮ್ಮಟವನ್ನು ನಡೆಸುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿ ಇರುವ ೨೦ ರಿಂದ ೫೦ ವರ್ಷ ವಯಸ್ಸಿನ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಏ.೩೦ ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡಮಿಯ ವೆಬ್ ಸೈಟ್ hಣಣಠಿ://ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg ನಿಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಎನ್.ಕರಿಯಪ್ಪ ತಿಳಿಸಿದ್ದಾರೆ.
Tags
ಹಾಸನ