ಶಾಸಕರಿಂದ ಕೋವಿಡ್ ಜಾಗೃತಿ ಜಾಥಾ

ಇಡೀ ದೇಶದಾದ್ಯಂತ ಕರೋನಾ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಂದು ಆಲೂರು ತಾಲ್ಲೂಕಿನಲ್ಲಿ ಕ್ಷೇತ್ರದ ಶಾಸಕರಾದ ಹೆಚ್. ಕೆ. ಕುಮಾರಸ್ವಾಮಿ ಅವರು ಕೋವಿಡ್ ಜಾಗೃತಿ ಜಾಥಾವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಸುವುದರ ಮೂಲಕ ಸಾರ್ವಜನಿಕರಲ್ಲಿ ಹಾಗೂ ವರ್ತಕರುಗಳಿಗೆ ಕರೋನಾ ಎರಡನೇ ಹಳೆಯ ತೀವ್ರತೆ ಹಾಗೂ ರೋಗ ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸ್ವತಃ ಶಾಸಕರೇ ಪ್ರತಿಯೊಂದು ಅಂಗಡಿಗಳಿಗೆ ತೆರಳಿ ಮಾಸ್ಕ್ ಹಾಕದೆ ಇದ್ದಂತಹ ಸಾರ್ವಜನಿಕರಿಗೆ ಹಾಗೂ ವರ್ತಕರಿಗೆ ಮಾಸ್ಕ್ ಹಾಕದೇ ಇರುವುದರಿಂದ ಆಗುವಂತಹ ದುಷ್ಪರಿಣಾಮ ಜೊತೆಗೆ ಸರ್ಕಾರದಿಂದ ಅಥವಾ ಸಂಬಂಧಪಟ್ಟ ಅಧಿಕಾರಿಗಳಿಂದ ವಿಧಿಸುವಂತಹ ದಂಡದ ಬಗ್ಗೆಯೂ ಕೂಡ ಮಾಹಿತಿಯನ್ನು ನೀಡುವುದರ ಜೊತೆಗೆ ನೆರೆದಿದ್ದಂತಹ ಸಾರ್ವಜನಿಕರಲ್ಲಿ ಕೋವಿಡ್ ನಿಂದ ಹೇಗೆ ದೂರವಿರಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸಿದರು .

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಶಿರೀನ್ ತಾಜ್, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ನಟರಾಜ್ ನಾಕಲಗೂಡು,ತಾಲ್ಲೂಕು ಪಂಚಾಯಿತಿ ಆಡಳಿತ ಅಧಿಕಾರಿಯಾದ ಸತೀಶ್ ಹಾಗೂ ಇನ್ನಿತರರು ಹಾಜರಿದ್ದರು.

Post a Comment

Previous Post Next Post