ರಕ್ತ ದಾನದ ಮಹತ್ವ ಎಲ್ಲರಿಗೂ ತಿಳಿಯುವಂತಾಗಬೇಕು : ತೌಫಿಕ್


ಆಲೂರು ಪಟ್ಟಣದಲ್ಲಿ ಪೀಸ್ ಮತ್ತು ಅವೇರ್ ನೆಸ್ ಹಾಗೂ ಜೀವ ಸಂಜೀವಿನಿ ರಕ್ತನಿಧಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಆಲೂರು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ತೌಫಿಕ್  ಪ್ರತಿಯೊಬ್ಬ ಜನಸಾಮಾನ್ಯರಿಗೂ ರಕ್ತದಾನದ ಮಹತ್ವ ಹಾಗೂ ಉಪಯೋಗಗಳ ಬಗ್ಗೆ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ಆಗಿಂದಾಗ್ಗೆ ನಡೆಯುತ್ತಿರಬೇಕು ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ಸಹ ಪ್ರತಿ 4ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದ್ದು ದೇಹದಲ್ಲಿ ಹೊಸ ರಕ್ತ ಕಣಗಳು ಉತ್ಪತ್ತಿಯಾಗಲು ರಕ್ತದಾನ ಸಹಕಾರಿಯಾಗಿದೆ ಎಂದು ತಿಳಿಸಿದರು .


ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪಟ್ಟಣ ಪಂಚಾಯಿತಿ ಸದಸ್ಯರಾದ ಅಬ್ದುಲ್ ಖುದ್ದೂಸ್ ಈ ರಕ್ತದಾನ ಶಿಬಿರವು ಇಂದು ಏಕಕಾಲದಲ್ಲಿ ಕರ್ನಾಟಕದಾದ್ಯಂತ ಒಟ್ಟು ಇಪ್ಪತ್ತು ಸ್ಥಳಗಳಲ್ಲಿ ನಡೆಯುತ್ತಿತ್ತು ರಕ್ತದಾನಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದರು , ಈ ರೀತಿಯ ಶಿಬಿರಗಳಿಂದ ಪಡೆದ೦ತಹ     ರಕ್ತವನು  ಕಷ್ಟದಲ್ಲಿರುವ ಬಡವರ ಅನುಕೂಲಕ್ಕಾಗಿ
ಬಳಸಿಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ಪೌರಕಾರ್ಮಿಕರು ,ಕೆ.ಇ.ಬಿ ನೌಕರರು, ಪತ್ರಕರ್ತರು ರಕ್ತದಾನ ಮಾಡುವುದರ ಜತೆಗೆ ಕಾರ್ಯಕ್ರಮದ ಯಶಸ್ಸಿಗೆ ಕಾರಣಕರ್ತರಾದರು .

Post a Comment

Previous Post Next Post