© ಹಾಸನ ಸೀಮೆ ನ್ಯೂಸ್
ಹಾಸನ ಏ.೨೯:- ನಗರದ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆಯಲ್ಲಿ ಸುಸಜ್ಜಿತ ಕೋವಿಡ್ ಕೇರ್ ಕೇಂದ್ರವನ್ನು ಅಬಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಉದ್ಘಾಟಿಸಿದರು.
ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆಯಲ್ಲಿ ಕೋವಿಡ್ ಕೇಂದ್ರದಲ್ಲಿ ಸುಮಾರು ೨೫೦ ಸೋಂಕಿತರಿಗೆ ಇಲ್ಲಿ ಚಿಕಿತ್ಸೆ ನೀಡಬಹುದಾಗಿದೆ. ತೀವ್ರವಲ್ಲದ ಆದರೆ ಸ್ವಲ್ಪಮಟ್ಟಿಗೆ ಸಮಸ್ಯೆ ಇರುವ ಸೋಕಿತರಿಗೆ ಇಲ್ಲಿ ಚಿಕಿತ್ಸೆ ನೀಡಲಾಗುವುದು. ಆಮ್ಲಜನಕ ಪೂರೈಕೆ ಕೂಡ ಇದೆ .ಅನಿವಾರ್ಯವಾದದಲ್ಲಿ ಇದನ್ನು ಡೆಸಿಗ್ನೆಟೆಡ್ ಕೋವಿಡ್ ಹೆಲ್ತ್ ಕೇರ್ ಕೇಂದ್ರವನ್ನಾಗಿ ಪರಿವರ್ತಿಸಲಾಗುವುದು ಜಿಲ್ಲೆಯ ಕೋವಿಡ್ ಚಿಕಿತ್ಸಾ ವ್ಯವಸ್ಥೆಗೆ ಇದರಿಂದ ಇನ್ನಷ್ಟು ಶಕ್ತಿ ಬರಲಿದೆ.
ಅಗತ್ಯವಿದ್ದಲ್ಲಿ ಇಲ್ಲಿ ಬೆಡ್ ಗಳ ಸಂಖ್ಯೆ ಹೆಚ್ಚಳಕ್ಕೆ ಅವಕಾಶವಿದೆ ಇಲ್ಲಿ ದಾಖಾಲಾಗಿ ಒಂದು ವೇಳೆ ತುರ್ತಾಗಿ ಇನ್ನಷ್ಟು ಚಿಕಿತ್ಸೆ ಅಗತ್ಯವೆನಿಸದಲ್ಲಿ ಕೋವಿಡ್ ಆಸ್ಪತ್ರೆಗೆ ***** ವರ್ಗಾಹಿಸಬಹುದಾಗಿದೆ.
ಸಚಿವರಿಂದ:- ಇದೇ ವೇಳೆ ಕೋವಿಡ್ ಕೇಂದ್ರವನ್ನು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಇದೊಂದು ಸುಸಜ್ಜಿತ ಕಟ್ಟಡ ಹಾಗೂ ಮಾನವ ಸಂಪನ್ಮೂಲ ಹಾಗೂ ಇತರ ಸೌಲಭ್ಯ ಒದಗಿಸುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಮುಖ್ಯಸ್ಥರಾದ ಡಾ ಪ್ರಸನ್ನ ಹಾಗೂ ಇತರರಿಗೆ ಅಭಿನಂದನೆ ಸಲ್ಲಿಸಿದರು ಇದೊಂದು ಪುಣ್ಯದ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ ಪರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ|| ಸತೀಶ್, ಆರ್ಯುವೇದ ಕಾಲೇಜಿನ ಪ್ರಾಂಶುಪಾಲರಾದ ಡಾ|| ಪ್ರಸನ್ನ ಎನ್. ರಾವ್, ಹಿಮ್ಸ್ ನಿರ್ದೇಶಕರಾದ ಡಾ|| ರವಿಕುಮಾರ್, ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ|| ಕೃಷ್ಣಮೂರ್ತಿ ಮತ್ತಿತರರು ಹಾಜರಿದ್ದರು.