ಹಾಸನ ಏ.೦೫ : ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ, ಲೋಕಸಭಾ ಸಂಸದರಾದ ಪ್ರಜ್ವಲ್ ರೇವಣ್ಣ, ಶಾಸಕರಾದ ರೇವಣ್ಣ ಇಂದು ಹೊಳೆನರಸೀಪುರ ತಾಲ್ಲೂಕಿನ ಚಾಕೇನಹಳ್ಳಿ ಗ್ರಾಮದಲ್ಲಿ ಜಿಲೆಟಿನ್ ಸ್ಫೋಟ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಧಿಕಾರಿಗಳ ತಂಡದೊAದಿಗೆ ಭೇಟಿ ನೀಡಿದ ಸಚಿವರು ಸಂಸದರು ಹಾಗೂ ಶಾಸಕರು ಪೋಲಿಸ್ ವರಿಷ್ಠಧಿಕಾರಿ ಗಣಿ ಮತ್ತು ಭವಿಜ್ಞಾನ ಅಧಿಕಾರಿಗಳಿಂದ ಮಾಹಿತಿ ಪಡೆದು ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಘಟನೆ ನಡೆದಿರುವುದು ವಿಷಾದನೀಯ ಈ ಬಗ್ಗೆ ಸಂಪೂರ್ಣ ತನಿಖೆಗೆ ಸೂಚಿಸಲಾಗಿದೆ. ಎಲ್ಲಿ ಲೋಪ ಉಂಟಾಗಿದೆ ಎಂಬುದನ್ನು ಪತ್ತೆ ಹಚ್ಚಿ ತಪ್ಪಿತಸ್ಥರು ಯಾರೇ ಇದ್ದರೂ ಕ್ರಮಕೈಗೊಳ್ಳಲಾಗುವುದು ಎಂದರು.
ಗೋದಾಮಿನ ಹೊರಭಾಗದಲ್ಲಿ ಸ್ಫೋಟಗೊಂಡಿದೆ ಘಟನೆ ನಡೆದ ನಂತರ ತಮಗೆ ಮಾಹಿತಿ ದೊರೆತ ತಕ್ಷಣ ಮುಖ್ಯಮಂತ್ರಿ ಗೃಹಮಂತ್ರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವರೊಂದಿಗೆ ಮಾತನಾಡಿದ್ದೇನೆ ಈಗಾಗಲೇ ತನಿಖೆ ಪ್ರಾರಂಭಿಸಲಾಗಿದ್ದು, ಮೂರ್ನಾಲ್ಕು ದಿನಗಳಲ್ಲಿ ವರದಿ ಲಭ್ಯವಾಗುವ ನಿರೀಕ್ಷೆ ಇದೆ ಎಂದು ಸಚಿವರು ಹೇಳಿದರು.
ದುರ್ಗಾಂಬ ಎಂಟಪ್ರೆöÊðಸಸ್ ಎಂಬುವರಿಗೆ ಸೇರಿದ ಗೋದಾಮು ಇದಾಗಿದ್ದು ತಮಿಳುನಾಡಿನಿಂದ ಜಿಲೆಟಿನ್ ತಂದು ಅನ್ ಲೋಡ್ ಮಾಡಿದ ಸಂದರ್ಭ ಘಟನೆ ನಡೆದಿದೆ. ಗಣಿ ಮಾಲೀಕರ ಪರವಾನಗಿ ಹೊಂದಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ದೊರೆತಿದೆ. ಸ್ಪೋಟಕ ತಂದಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದರು.
ಚಾಕನಹಳ್ಳಿಯಲ್ಲಿ ಜಿಲೆಟಿನ್ ಹೇಗೆ ಪೂರೈಕೆಯಾಯಿತು ಸ್ಫೋಟಕ್ಕೆ ಕಾರಣವೇನು ಎಂಬುದು ತಿಳಿಯಬೇಕಾಗಿದೆ ಬಾಂಬ್ ನಿಷ್ಕಿçಯದಳ ಎಫ್. ಎಸ್.ಎಲ್ ತಂಡ ಕೂಡ ಬಂದಿದ್ದು ಪರಿಶೀಲನೆ ನಡೆಸುತ್ತಿದೆ ವರದಿ ಬಂದ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದರು.
ಗಾಯಾಳುಗಳಿಗೆ ಸರ್ಕಾರದ ವತಿಯಿಂದ ಚಿಕಿತ್ಸೆ ಒದಗಿಸಲಾಗುವುದು ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ದೊರೆಯಬಹುದಾದ ಎಲ್ಲಾ ನೆರವನ್ನು ಒದಗಿಸಲಾಗುವುದು. ತಾವು ಈ ಹಿಂದೆಯೇ ಅಧಿಕಾರಿಗಳೊಂದಿಗೆ ಸಭೆನಡೆಸಿ ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳಲ್ಲಿನ ಪರವಾನಗಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲಿಸಲು ನಿರ್ದೇಶನ ನೀಡಿದ್ದು ಈಗ ಮತ್ತೊಮ್ಮೆ ಅಕ್ರಮ ಗಣಿಗಾರಿಕೆಗಳ ವಿರುದ್ಧ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಗೋಪಾಲಯ್ಯ ಹೇಳಿದರು.
ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ ಅವರು ಮಾತನಾಡಿ ಹಾಸನ ಜಿಲ್ಲೆಯಲ್ಲಿ ಇಂತಹ ದುರ್ಘಟನೆ ನಡೆದಿರುವುದು ಬೇಸರತಂದಿದೆ ಈ ಬಗ್ಗೆ ಸಂಪೂರ್ಣ ತನಿಖೆ ನಡೆದು ತಪ್ಪಿತಸ್ಥರನ್ನು ಶಿಕ್ಷಿಸ ಬೇಕಾಗಿದೆ ಎಂದರು.
ಸರ್ಕಾರ ಮೃತರ ಹಾಗೂ ಗಾಯಾಳುಗಳ ಕುಟುಂಬಕ್ಕೆ ಅಧಿಕ ನೆರವು ಸೇರಿದಂತೆ ಎಲ್ಲ ರೀತಿಯ ಅನುಕೂಲ ಕಲ್ಪಿಸಬೇಕು, ಮೃತರು ಹಾಗೂ ಗಾಯಾಳುಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಸೌಲಭ್ಯ ಒದಗಿಸಬೇಕು ಎಂದು ಅವರು ಹೇಳಿದರು.
ಸ್ಪೋಟಕಗಳನ್ನು ಅವೈಜ್ಞಾನಿಕವಾಗಿ ನಿರ್ವಹಣೆ ಮಾಡಿರುವ ಕಾರಣ ಸ್ಪೋಟಗೊಂಡಿದೆ. ಈ ಜಾಗ ಸ್ಪೋಟಕಗಳನ್ನು ದಾಸ್ತಾನು ಇರಿಸಲು ಸೂಕ್ತವಲ್ಲ ತಪ್ಪಿತಸ್ಥರನ್ನು ಬಂಧಿಸಿದ ನಂತರ ಹೆಚ್ಚಿನ ವಿವರಗಳನ್ನು ತಿಳಿಯಬಹುದಾಗಿದೆ ಎಂದರು.
ಶಾಸಕರಾದ ಎಚ್.ಡಿ.ರೇವಣ್ಣ ಅವರು ಮಾತನಾಡಿ ಪ್ರತಿ ಮೂರು ತಿಂಗಳಿಗೊಮ್ಮೆ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ಮಾಡಲಾಗಿದೆ. ಪರವಾಗಿ ಕೂಡ ಇದೆ ತನಿಖೆಯಿಂದ ಸತ್ಯ ಸತ್ಯತೆ ತಿಳಿದು ಬರಬೇಕಿದೆ, ಮೃತರ ಕುಟುಂಬಕ್ಕೆ ಸರ್ಕಾರ ಕನಿಷ್ಠ ೫ ಲಕ್ಷರೂ ಪರಿಹಾರ ಒದಗಿಸಬೇಕು. ಇನ್ನೊಮ್ಮೆ ಜಿಲ್ಲೆಯಲ್ಲಿ ಇಂತ ಘಟನೆ ಮರುಕಳಿಸಬಾರದು ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹೇಳಿದರು.
ಪೊಲೀಸ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪವಿಭಾಗಾಧಿಕಾರಿ ಜಗದೀಶ್, ಗಣಿ ಮತ್ತು ಭೂ-ವಿಜ್ಞಾನಾಧಿಕಾರಿ ನಾಗರಾಜ್ ತಹಸೀಲ್ದಾರ್ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.
