ಸರ್ಕಾರಿ ಆದೇಶದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ತಿದ್ದುಪಡಿ ಒತ್ತಾಯಿಸಿ ಮನವಿಪತ್ರ

ಆಲೂರು : ಪ್ರಸ್ತುತ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು,  ಹಾಸನ ನಗರದಲ್ಲಿರುವ ಎ.ಕೆ.ಬೋರ್ಡಿಂಗ್ ಹೋಂ ಸ್ಥಳದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಸ್ಮಾರಕ ಮತ್ತು ವಸ್ತು ಸಂಗ್ರಹಾಲಯ ನಿರ್ಮಿಸಲು 1 ಕೋಟಿ ಅನುದಾನವನ್ನು ಘೋಷಣೆ ಮಾಡಿದ್ದು, ಈ 1 ಕೋಟಿ ರೂ ಅನುದಾನದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಸ್ಮಾರಕ ಮತ್ತು ವಸ್ತುಸಂಗ್ರಹಾಲಯ ನಿರ್ಮಿಸಲು ಸಾಧ್ಯವಾಗುವುದಿಲ್ಲ ಆದ್ದರಿಂದ  20 ಕೋಟಿ ರೂ. ಅನುದಾನವನ್ನು ನೀಡುವಂತೆ ಸರ್ಕಾರವನ್ನು ಒತ್ತಾಯಿಸಿ ತಾಲ್ಲೂಕು ಕಚೇರಿ  ಶಿರಸ್ತೆದಾರ್ ಶಿವಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿದರು.                        


ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಕೆ ಈರಪ್ಪ ಮಾತನಾಡಿ,ಹಾಸನ ನಗರದಲ್ಲಿರುವ ಎ.ಕೆ. ಬೋರ್ಡಿಂಗ್ ಹೋಂ ಸ್ಥಳದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಮೈಸೂರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ಮಾರಕ ಮತ್ತು ವಸ್ತುಸಂಗ್ರಹಾಲಯ ಸ್ಥಾಪಿಸಲು 1 ಕೋಟಿ ರೂ ಅನುದಾನವನ್ನು ಸರ್ಕಾರ ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದ್ದು ಈ ಅನುದಾನ ಸಾಲದೇ ಇರುವುದರಿಂದ ಹೆಚ್ಚುವರಿಯಾಗಿ 20 ಕೋಟಿ ರೂ ಗಳನ್ನು ಮಂಜೂರು ಮಾಡುವಂತೆ ವಿನಂತಿಸಿಕೊಂಡರು.

 ಕರ್ನಾಟಕ ದಲಿತ ಸಂಘರ್ಷ ಸಮಿತಿ, ತಾಲ್ಲೂಕು ಸಮಿತಿ ಸಂಚಾಲಕ ಗೇಕರವಳ್ಳಿ ಬಸವರಾಜು ಮಾತನಾಡಿ, ಪ್ರಸ್ತುತ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ರವರು ಹಾಸನದಲ್ಲಿರುವ ಎ.ಕೆ ಬೋರ್ಡಿಂಗ್ ಹೋಂ ಸ್ಥಳದಲ್ಲಿ ಡಾ ಅಂಬೇಡ್ಕರ್ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ಹಣ ಘೋಷಣೆ ಮಾಡಿದ್ದು , ಇದಕ್ಕಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾನ್ಯ ಸಮಾಜ ಕಲ್ಯಾಣ ಸಚಿವ ಬಿ ಶ್ರೀರಾಮುಲು ಹಾಗೂ ಸರ್ಕಾರದ ಅಧಿಕಾರಿಗಳು ಹಾಗೂ ಸಹಕರಿಸಿದ ಎಲ್ಲ ರಾಜಕೀಯ ಪಕ್ಷದ ನಾಯಕರುಗಳಿಗೆ ಧನ್ಯವಾದಗಳನ್ನು ಅರ್ಪಿಸಿದ ಅವರು ಈ ಹಣದಲ್ಲಿ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಸಂಶೋಧನಾ ಕೇಂದ್ರದ ನಿರ್ಮಾಣ ಸಾಧ್ಯವಾಗುವುದಿಲ್ಲ ಸದರಿ ಉದ್ದೇಶಕ್ಕಾಗಿ ಹೆಚ್ಚುವರಿಯಾಗಿ 20 ಕೋಟಿ ರೂ ಗಳ ಅನುದಾನವನ್ನು ಮಂಜೂರು ಮಾಡಬೇಕು, ಸರ್ಕಾರಿ ಆದೇಶದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು  ತಿದ್ದುಪಡಿಯಾಗಬೇಕು ಎಂದು ಒತ್ತಾಯಿಸಿ ಮನವಿಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಕೆ.ಈರಪ್ಪ ,ತಾಲ್ಲೂಕು ಸಂಚಾಲಕ ಬಸವರಾಜು ಗೇಕರವಳ್ಳಿ , ತಾಲ್ಲೂಕು ಸಂಘಟನಾ ಸಂಚಾಲಕ ಮಂಜು ಸುಳುಗೋಡು, ಕೊಂಗವಳ್ಳಿ ಸುರೇಶ್, ಹೊನ್ನವಳ್ಳಿ ಹೊನ್ನಪ್ಪ , ಕಾರ್ಜುವಳ್ಳಿ ಕೆ.ಕೆ .ವಸಂತ, ಹಿದನಹಳ್ಳಿ ಬಸವಯ್ಯ,
ಭರತವಳ್ಳಿ ಜವರಯ್ಯ, ಅಜ್ಜೇನಹಳ್ಳಿ ರಂಗಸ್ವಾಮಿ, ಶಿವಣ್ಣ ಚಿಕ್ಕಕಣಗಾಲು, ಪಾಂಡು ನೇರಲಕೆರೆ ಸೇರಿದಂತೆ ಇತರರು ಇದ್ದರು.

Post a Comment

Previous Post Next Post