ಹಾಸನ: ನಗರದ ಬಿ.ಎಂ. ರಸ್ತೆ, ಶ್ರೀಕೃಷ್ಣ ಹೋಟೆಲ್ ಬಳಿ ಏಪ್ರಿಲ್ ೧೮ ಮತ್ತು ೧೯ ರಂದು ನಡೆಯಲಿರುವ ರಾಜ್ಯ ಕರ‍್ಯಕಾರಣಿ ಸಭೆ ನಡೆಯುವ ಸ್ಥಳದ ಪೂಜ ಕಾರ್ಯಕ್ರಮದಲ್ಲಿ ಗುದ್ದಲಿ ಪೂಜೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಎರಡು ದಿನಗಳ ಕಾಲ ನಡೆಯುವ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯದ ಆಗುಹೋಗುಗಳ ಹಾಗೂ ತಳಮಟ್ಟದಿಂದ ಪಕ್ಷ ಸಂಘಟನೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಬಿಜೆಪಿ ಪಕ್ಷದ ಎಲ್ಲಾ ಪ್ರಮುಖರು ಮತ್ತು ರಾಜ್ಯದ ವಿವಿಧ ಭಾಗಗಳಿಂದ ೩೦೦ ಜನ ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿರುವರು. ಸಾಮಾಜಿಕ ಅಂತರ ಕಾಪಾಡಿಕೊಂಡು ಕಾರ್ಯಕ್ರಮ ಮಾಡಲಾಗುವುದು. ಆರು ಅಡಿ ಅಂತರದಲ್ಲಿ ಕುರ್ಚಿಗಳನ್ನು ಹಾಕಲಾಗುತ್ತದೆ. ಇಂದು ಸಾಂಕೇತಿಕವಾಗಿ ಟೆಂಟ್ ಹೌಸ್ ಹಾಕಲು ಗುದ್ದಲಿ ಪೂಜೆ ಮಾಡಲಾಗಿದೆ ಎಂದರು.
ಈಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹುಲ್ಲಳ್ಳಿ ಸುರೇಶ್, ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ, ಮೈ.ವಿ. ರವಿಶಂಕರ್, ಮಾಜಿ ಅಧ್ಯಕ್ಷ ರೇಣುಕುಮಾರ್, ಬೇಲೂರು ಮಂಡಲದ ಮಾಜಿ ಅಧ್ಯಕ್ಷ ಪ್ರಕಾಶ್, ನಗರಾಧ್ಯಕ್ಷ ವೇಣುಗೋಪಾಲ್, ಐನೆಟ್ ವಿಜಯಕುಮಾರ್, ಪ್ರೀತಿವರ್ಧನ್, ಮಣಿ ಇತರರು ಪಾಲ್ಗೊಂಡಿದ್ದರು.
