ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯಾಧ್ಯಂತ ಸಾರಿಗೆ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದಾರೆ. ಇಂತಹ ಸಾರಿಗೆ ನೌಕರರ ಮುಷ್ಕರ ಇಂದಿಗೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದೊಂದಿಗೆ ಸಂಧಾನಕ್ಕೆ ಒಪ್ಪದಂತ ಸಾರಿಗೆ ನೌಕರರಿಗೆ ಸರ್ಕಾರ ಈಗ ಮತ್ತೊಂದು ಶಾಕ್ ನೀಡಿದೆ. ನಿವೃತ್ತ ಚಾಲಕ ಹಾಗೂ ನಿರ್ವಾಹಕರನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನಿಯೋಜನೆಗೊಳಿಸಿಕೊಂಡು, ಸಾರಿಗೆ ಬಸ್ ಸಂಚಾರಕ್ಕೆ ಅಧಿಸೂಚನೆ ಹೊರಡಿಸಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದಂತ ಶಿವಯೋಗಿ ಸಿ ಕಳಸದ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿ, ಕಳೆದ 2 ವರ್ಷಗಳಲ್ಲಿ ನಿವೃತ್ತಿ ಹೊಂದಿ 62 ವರ್ಷ ವಯೋಮಿತಿ ಮೀರದ ಚಾಲಕ ಹಾಗೂ ನಿರ್ವಾಹಕರನ್ನು ತಾತ್ಕಾಲಿಕವಾಗಿ ನಿಗಮದಲ್ಲಿ ಒಪ್ಪಂದದ ಆಧಾರದ ಮೇಲೆ ನಿಯೋಜಿಸಲು ಉದ್ದೇಶಿಸಲಾಗಿರುತ್ತದೆ.
Tags
ರಾಜ್ಯ