ಹಾಸನದಲ್ಲಿ ದಿನನಿತ್ಯ ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅಗತ್ಯ ವಸ್ತುಗಳು ಬಿಟ್ಟು ಬೇರೆ ಅಂಗಡಿಗಳನ್ನು ಅಧಿಕಾರಿಗಳು ಬಂದ್ ಮಾಡಿಸುತ್ತಿದ್ದಾರೆ.
ಜಿಲ್ಲಾಧಿಕಾರಿ ಆರ್ ಗಿರೀಶ್ ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದ್ದು, ಹಾಸನದಲ್ಲಿ ಕೋವಿಡ್ ಹೆಚ್ಚಾಗ್ತಾ ಇದೆ. ಜಾಗರೂಕರಾಗಿರಿ. ನೈಟ್ ಕರ್ಫ್ಯೂ ನಿಯಮಗಳನ್ನು ಪಾಲಿಸಿ ಎಂದು ಹೇಳಿದ್ದಾರೆ. ಅಗತ್ಯ ವಸ್ತುಗಳು ಬಿಟ್ಟು ಹಾಸನ ನಗರಸಭೆ ವ್ಯಾಪ್ತಿಯ ಎಲ್ಲಾ ಅಂಗಡಿಗಳನ್ನು ಅಧಿಕಾರಿಗಳು ಬಂದ್ ಮಾಡಿಸುತ್ತಿದ್ದು, ಚಿನ್ನ ಬೆಳ್ಳಿ ಅಂಗಡಿ, ಬಟ್ಟೆ ಅಂಗಡಿ ಸೇರಿದಂತೆ ನಗರದ ಎಲ್ಲಾ ಅಂಗಡಿಗಳನ್ನ ನಗರಸಭೆ ಸಿಬ್ಬಂದಿ ಮತ್ತು ಪೊಲೀಸರು ಬಂದ್ ಮಾಡಿಸಿದ್ದಾರೆ.
Tags
ಹಾಸನ
