ಮಡಿಕೇರಿ: ಕೌಟುಂಬಿಕ ಕಲಹಕ್ಕೆ ತನ್ನ ಮನೆಯವರ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆರು ಜನರ ಸಜೀವ ದಹನಕ್ಕೆ ಕಾರಣನಾಗಿದ್ದ ಅರೋಪಿ ಬೋಜ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ.
ಮುಗುಟಗೇರಿ ಸಮೀಪದ ಕಾಫಿ ತೋಟದಲ್ಲಿ ಭೋಜನ ಮೃತದೇಹ ಮಂಗಳವಾರ ಮುಂಜಾನೆ ಪತ್ತೆಯಾಗಿದೆ. ಮತ್ತೊಂದೆಡೆ ಗಾಯಗೊಂಡಿದ್ದ ಮತ್ತೋರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೈಸೂರು ಕೆಆರ್ ಆಸ್ಲತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಪ್ರಕರಣದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು ಇದೀಗ ಆರೋಪಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಕುಡಿದ ಅಮಲಿನಲ್ಲಿದ್ದ ಬೋಜ, ಶನಿವಾರ ನಸುಕಿನಲ್ಲಿ ತನ್ನ ಮನೆಯವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಘಟನೆಯಲ್ಲಿ ಪತ್ನಿ, ನಾಲ್ಕು ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದರು. ಘಟನೆ ಬಳಿಕ ಬೋಜ ನಾಪತ್ತೆಯಾಗಿದ್ದ. ಇಂದು ಬೆಳಗ್ಗೆ ಆತನ ಮೃತದೇಹ ಪತ್ತೆಯಾಗಿದೆ.