ಕೋವಿಡ್ -೧೯ ನಿಯಂತ್ರಣ ಕ್ರಮಗಳ ಅನುಷ್ಠಾನಕ್ಕೆ ಸೂಚನೆ

ಹಾಸನ.ಏ.೨೮:- ಶ್ರವಣ ಬೆಳಗೊಳ ಕ್ಷೇತ್ರದ ಶಾಸಕರಾದ ಸಿ.ಎನ್ ಬಾಲಕೃಷ್ಣ ಅವರು ಚನ್ನರಾಯಪಟ್ಟಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಕೋವಿಡ್ -೧೯ ನಿಯಂತ್ರಣ ಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ.



ಕೋವಿಡ್ ಸಂಬAಧಿಸಿದAತೆ ಗ್ರಾಮಗಳಲ್ಲಿ ಹೊಂ ಐಸೋಲೇಷನ್ ನಲ್ಲಿರುವವರ ಬಗ್ಗೆ ತೀವ್ರ ನಿಗಾವಹಿಸಿ ಎಂದರಲ್ಲದೆ ಹಿರಿಯ ಅಧಿಕಾರಿಗಳೊಂದಿಗೆ ಸಂಪರ್ಕವನ್ನಿಟ್ಟುಕೊAಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವಂತೆ ಮತ್ತು ಕೋವಿಡ್ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜನತೆಗೆ ತಿಳಿಸಬೇಕೆಂದು ಶಾಸಕರು ನಿರ್ದೇಶನ ನೀಡಿದರು. ಕೋವಿಡ್ ಬಾಧಿತರುಗಳಿಗೆ ಅನಗತ್ಯ ಗೊಂದಲಗಳು ಉಂಟಾದಲ್ಲಿ ತಾಲ್ಲೂಕಿನ ಆರೋಗ್ಯ ಸಿಬ್ಬಂದಿಗಳಿAದ ಮಾರ್ಗದರ್ಶನ ನೀಡಲು ಕ್ರಮವಹಿಸುವಂತೆ ಸೂಚನೆ ನೀಡಿದರು.


ಸಭೆಯಲ್ಲಿ ತಹಸೀಲ್ದಾರ್ ಮಾರುತಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಕುಮಾರ್ ಹಾಗೂ ಮತ್ತಿತರರು ಹಾಜರಿದ್ದರು.


Post a Comment

Previous Post Next Post