ಇಲಾಖಾ ಪರೀಕ್ಷೆ ಮೂಂದೂಡಿಕೆ.

 ಹಾಸನ ಏ.೨೧: ೨೦೨೦ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ನಡೆಸಲು ಏ.೨೨ ರಿಂದ ೩೦ ರವರೆಗೆ ನಿಗದಿಪಡಿಸಿತ್ತು. ಸದರಿ ಪರೀಕ್ಷೆಗಳಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಅಭ್ಯರ್ಥಿಗಳು ಏ.೨೨ರಿಂದ ೨೮ ರವರೆಗೆ ಬೆಂಗಳೂರು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕಿರುತ್ತದೆ ೨೯ ಮತ್ತು ೩೦ ರಂದು ವಿಭಾಗೀಯ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಹಾಜರಾಗಬೇಕಿರುತ್ತದೆ. 


ಆದ್ದರಿಂದ ಕೋವಿಡ್-೧೯ ಸಾಂಕ್ರಾಮಿಕ ರೋಗಾಣು ಹರಡುವಿಕೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವುದರಿಂದ ಹಾಗೂ ಸರ್ಕಾರದ ಮಾರ್ಗಸೂಚಿ ಅನ್ವಯ ದಿನಾಂಕ:೨೧.೦೪.೨೦೨೧ ರಿಂದ ೦೪.೦೫.೨೦೨೧ ರವರೆಗೆ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಕರ್ಪ್ಯೂ ಜಾರಿ ಮಾಡಿರುವ ಹಿನ್ನಲೆಯಲ್ಲಿ ಏ. ೨೨ ರಿಂದ ೩೦ ರವರೆಗೆ ನಡೆಯಬೇಕಿದ್ದ ಇಲಾಖಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಿದೆ ಮುಂದಿನ ಪರೀಕ್ಷಾ ದಿನಾಂಕಗಳನ್ನು ನಂತರದ ದಿನಗಳಲ್ಲಿ ಆಯೋಗದ ಅಂತರ್ಜಾಲದಲ್ಲಿ hಣಣಠಿ://ಞಠಿsಛಿ.ಞಚಿಡಿ.ಟಿiಛಿ.iಟಿ ರಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ತಿಳಿಸಿದ್ದಾರೆ.


Post a Comment

Previous Post Next Post