ಹಾಸನ.ಏ.೨೮:- ರಾಜ್ಯಾದ್ಯಂತ ಬೀಸುತ್ತಿರುವ ಕೊರೋನಾ ಸೋಂಕಿನ ೨ನೇ ಅಲೆಯ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಎರಡು ವಾರದ ಅವಧಿಯ ಕರ್ಪ್ಯೂವಿನಿಂದ ಬಾಧಿತವಾಗಿರುವ ಕೂಲಿ ಕಾರ್ಮಿಕರಿಗೆ ಪರಿಹಾರ ಪ್ಯಾಕೇಜ್ ನೀಡಲು ಮತ್ತು ಹಾಸನ ಜಿಲ್ಲೆಯಲ್ಲಿನ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಲು ಮನವಿ ಮಾಡಿ ಮುಖ್ಯ ಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭಾ ಸದಸ್ಯರು ಹೆಚ್.ಡಿ.ದೇವೇಗೌಡರು ಪತ್ರ ಬರೆದಿದ್ದಾರೆ.
