ಏಪ್ರಿಲ್ ೨೪ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನ.

 ಹಾಸನ ಏ.೨೧:- ಕೇಂದ್ರಸರ್ಕಾರದ ದೀನ್ ದಯಾಳ್ ಉಪಾಧ್ಯಾಯ ಪಂಚಾಯ್ತಿ ಸಶಕ್ತಿಕರಣ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಹಾಸನ ಜಿಲ್ಲಾ ಪಂಚಾಯಿತಿಗೆ ವರ್ಚುವಲ್ ವೇದಿಕೆ ಮೂಲಕ ಏಪ್ರಿಲ್ ೨೪ರಂದು ಪ್ರಶಸ್ತಿ ನೀಡಲಾಗುವುದು.

ರಾಷ್ಟಿçÃಯ ಪಂಚಾಯತ್ ರಾಜ್ ದಿನವಾದ ಏಪ್ರಿಲ್ ೨೪ರಂದು ನವದೆಹಲಿಯಿಂದ ವಿಡಿಯೋ ಸಂವಾದದ ಮೂಲಕ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ರಾಜ್ಯದ ಎಲ್ಲಾ ಪ್ರಶಸ್ತಿ ಪುರಸ್ಕöÈತ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಈ ವರ್ಚುವಲ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

ಈಗಾಗಲೇ ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಪ್ರಶಸ್ತಿಯನ್ನು ರವಾನೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭದ ಪೂರ್ವಭಾವಿ ಸಿದ್ದತೆಯನ್ನು ಎಪ್ರಿಲ್ ೨೨ರಂದು ಎನ್.ಐ.ಸಿ ಸ್ಟುಡಿಯೋದಲ್ಲಿ ಆಯೋಜಿಸಲಾಗಿದ್ದು ಪ್ರಶಸ್ತಿ ಪುರಸ್ಕöÈತ ಸಂಸ್ಥೆಗಳ ಪ್ರತಿನಿಧಿಗಳು ಹಾಜರಿದ್ದು ಏಪ್ರಿಲ್ ೨೪ನೇ ಕಾರ್ಯಕ್ರಮ ಸ್ವರೂಪವನ್ನು ಸೂಚಿಸಿದ್ದಾರೆ.

ಏಪ್ರಿಲ್ ೨೪ರಂದು ೧೧ಗಂಟೆಗೆ ವಿಡಿಯೋ ಸಂವಾದದ ಮೂಲಕ ಪ್ರಧಾನಿಯವರು ಸಾಂಕೇತಿಕವಾಗಿ ಪ್ರಶಸ್ತಿ ಪ್ರಧಾನ ಮಾಡಲಿರುವರು.


ಹಾಸನ ಜಿಲ್ಲಾ ಪಂಚಾಯಿತಿ ಕಾರ್ಯಕ್ರಮವು ಅತ್ಯುತ್ತಮ ಅನುಷ್ಠಾನದ ಮೂಲಕ ರಾಜ್ಯದಲ್ಲಿ ಸಮಗ್ರವಾಗಿ ಪ್ರಶಸ್ತಿಗೆ ಆಯ್ಕೆಯಾಗಿದೆ ಇದೇ ರೀತಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕು ಪಂಚಾಯಿತಿ, ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯ ಬೆಂಗಳೂರು ಪೂರ್ವ ತಾಲ್ಲೂಕು ಪಂಚಾಯಿತಿ, ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲ್ಲೂಕಿನ ತುಮ್ಮಿನಕಟ್ಟೆ ಗ್ರಾಮ ಪಂಚಾಯಿತಿ, ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಯಡಗನಹಳ್ಳಿ ಗ್ರಾಮ ಪಂಚಾಯಿತಿ, ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಕರ್ಣಕುಪ್ಪೆ ಗ್ರಾಮ ಪಂಚಾಯಿತಿಗೆ  ದೊರೆತಿದೆ.


Post a Comment

Previous Post Next Post