ಹಾಸನ ಮೇ 29:-ಜಿಲ್ಲೆಯಲ್ಲಿಂದು ಹೊಸದಾಗಿ 1311 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 82038 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 13926 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 67128 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 156 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್ನಿಂದ 8 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 984 ಮಂದಿ ಸಾವನ್ನಪ್ಪಿದ್ದಾರೆ.