ಹಾಸನದಲ್ಲಿಂದು ಒಟ್ಟು 1348 ಕರೋನ ಪಾಸಿಟಿವ್ ಪತ್ತೆಯಾಗಿದ್ದು 9 ಮಂದಿ ಸಾವನ್ನಪ್ಪಿದರೆ

ಹಾಸನ ಮೇ 6:-ಜಿಲ್ಲೆಯಲ್ಲಿಂದು ಹೊಸದಾಗಿ 1348 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 48043 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 11430 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 35973 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 96 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ 9 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 640 ಮಂದಿ ಸಾವನ್ನಪ್ಪಿದ್ದಾರೆ. 

Post a Comment

Previous Post Next Post