ಹಾಸನ ಮೇ 5:-ಜಿಲ್ಲೆಯಲ್ಲಿಂದು ಹೊಸದಾಗಿ 1603 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 46695 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 10927 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 35137 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 95 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ 10 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 631 ಮಂದಿ ಸಾವನ್ನಪ್ಪಿದ್ದಾರೆ.