ಭಾರದಲ್ಲಿ ಕಳೆದ 24 ಘಂಟೆಯಲ್ಲಿ 3,26,850 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್

 ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,96,427 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,69,48,874ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,511 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,07,231 ಕ್ಕೆ ಏರಿಕೆಯಾಗಿದೆ.



ಇನ್ನು ದೇಶದಲ್ಲಿ 25,86,782 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,40,54,861 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,26,850 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ ಒಂದೇ ದಿನ 20,58,112 ಜನರಿಗೆಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 33,25,94,176 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 19,85,38,999 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Post a Comment

Previous Post Next Post