ತಂಬಾಕು ತ್ಯಜಿಸಿ ಆರೋಗ್ಯ ರಕ್ಷಿಸಿಕೊಳ್ಳಿ: ಕವಿತ ರಾಜಾ ರಾಂಸ

ಹಾಸನ ಮೇ ೩೧:- ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಹಲವು ರೀತಿಯ ದುಷ್ಪರಿಣಾಮವನ್ನು ಬೀರುತ್ತವೆ. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ತ್ಯಜಿಸುವ ಮೂಲಕ  ಆರೋಗ್ಯವನ್ನು ರಕ್ಷಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ ಅವರು ತಿಳಸಿದ್ದಾರೆ.



ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ, ಜಿಲ್ಲಾ ತಂಬಾಕು ಕೋಶದ ವತಿಯಿಂದ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿಂದು ವಿಶ್ವ ತಂಬಾಕು ರಹಿತ ದಿನಾಚಾರಣೆ ಅಂಗವಾಗಿ ಜಾಗೃತಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕೋವಿಡ್ ತಡೆಗಟ್ಟುವಲ್ಲಿ ಎಲ್ಲರ ಪಾತ್ರ ಅಗತ್ಯ ಈ ನಿಟ್ಟಿನಲ್ಲಿ ಎಲ್ಲರೂ ಕಡ್ಡಾವಾಗಿ ಮಸ್ಕ್ ಧರಿಸುವುದರ ಜೊತೆಗೆ  ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಿದರು.

       

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಸತೀಶ್ ಹಾಗೂ ಮತ್ತಿತರರು ಹಾಜರಿದ್ದರು.


Post a Comment

Previous Post Next Post