ಹಾಸನ ಮೇ27 :- ಜಿಲ್ಲೆಯಲ್ಲಿಂದು ಹೊಸದಾಗಿ 1501 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 79291 ಏರಿಕೆಯಾಗಿದೆ. ಕಳೆದ ವರ್ಷವೂ ಸೇರಿದಂತೆ 2021 ಮಾರ್ಚ್ 27 ರಿಂದ ಇದುವರೆಗೆ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 50122 ಆಸ್ಪತ್ರೆಯಿಂದ ಇಂದು 1351 ಮಂದಿ ಬಿಡುಗಡೆ ಹೊಂದಿರುವವರು ಸೇರಿದಂತೆ ಒಟ್ಟು 64896 ಮಂದಿ ಇದುವರೆಗೆ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. 13436 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, 162 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 7 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 959ಕ್ಕೆ ಏರಿಕೆಯಾಗಿದೆ