ಬೆಂಗಳೂರು: ಆಕ್ಸಿಜನ್ ಸಿಗದೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಮೃತಪಟ್ಟ ಬಳಿಕ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗುತ್ತಿದೆ.
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಬೇಕಿತ್ತು. ಅವರು ಸಮಯಕ್ಕೆ ಸರಿಯಾಗಿ ಪೂರೈಕೆ ಮಾಡಿಲ್ಲ ಎಂದು ಚಾಮರಾಜನಗರ ಡಿಸಿ ರವಿ ಅವರು ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡದ ರೋಹಿಣಿ ಸಿಂಧೂರಿ, ಎಲ್ಲದಕ್ಕೂ ಆರೋಗ್ಯ ಸಚಿವರೇ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ಇದರ ನಡುವೆ ಚಾಮರಾಜನಗರಕ್ಕೆ ಆಕ್ಸಿಜನ್ ಪೂರೈಸದಂತೆ ಏಜೆನ್ಸಿಗಳಿಗೆ ರೋಹಿಣಿ ಸಿಂಧೂರಿ ಹೇಳಿದ್ದರು ಎಂಬ ಆರೋಪ ಕೂಡ ಕೇಳಿಬರುತ್ತಿದೆ.
ತಕ್ಷಣವೇ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡುವಂತೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಒತ್ತಡ ಹಾಕಿದ್ದಾರೆ. ಸರ್ಕಾರಕ್ಕಿಂತ ಯಾರೂ ದೊಡ್ಡವರಲ್ಲ, ಮೊದಲು ಅವರನ್ನು ಎತ್ತಂಗಡಿ ಮಾಡಿ ಎಂದು ಹೇಳಿದ್ದಾರೆ.