ಹಾಸನ ಮೇ ೩೧:- ಜಿಲ್ಲೆಯಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಜೂ. ೩,೪ ಮತ್ತು ೫ ರಂದು ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಅದರಂತೆ ಜಿಲ್ಲೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಣಿಯಾಗಿರುವ ಎಲ್ಲಾ ಕಟ್ಟಡ ಕಾರ್ಮಿಕರು ತಮ್ಮ ಬಳಿ ಇರುವ ಮಂಡಳಿಯು ನೀಡಿರುವ ಗುರುತಿನ ಚೀಟಿಯನ್ನು ತೋರಿಸಿ ತಮ್ಮ ಸಮೀಪದ ಸ್ಥಳದಲ್ಲಿರುವ ಲಸಿಕಾ ಕೇಂದ್ರಕ್ಕೆ ಜೂ. ೩,೪ ಮತ್ತು ೫ ರಂದು ಯಾವುದಾದರೂ ಒಂದು ದಿನ ಹೋಗಿ ಲಸಿಕೆ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.
Tags
ಹಾಸನ
