ಹಾಸನ ಮೇ 18 :-ಜಿಲ್ಲೆಯಲ್ಲಿಂದು ಹೊಸದಾಗಿ 896 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 66589 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 14546 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 51194 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 135 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 18 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 849ಮಂದಿ ಸಾವನ್ನಪ್ಪಿದ್ದಾರೆ.