ಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಹಾಸನ ಮೇ26:- ಪ್ರತಿಭಾವಂತ ಮಾಧ್ಯಮಿಕ/ಪ್ರೌಢ ಶಾಲಾ ಕ್ರೀಡಾಪಟುಗಳಿಗೆ (6ರಿಂದ 10ನೇ ತರಗತಿವಿದ್ಯಾರ್ಥಿಗಳ) 2020-21ನೇ ಸಾಲಿನಲ್ಲಿ ವಾರ್ಷಿಕ ರೂ.10,000/-ಗಳಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.



 ಕಚೇರಿಯ ಅಧಿಕೃತ ಜಾಲತಾಣ http://serviceonline.gov.in/Karnataka ಮೂಲಕ ಆನ್‌ಲೈನ್‌ನಲ್ಲಿ ಜೂನ್ 25 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

 ಅರ್ಜಿದಾರರು 2020-21ನೇ ಸಾಲಿನ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢ ಶಾಲೆಯಲ್ಲಿ (6ರಿಂದ 10 ನೇ ತರಗತಿ) ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು 2020 ರ ಏಪ್ರಿಲ್ 1 ರಿಂದ 2021ರ ಮಾರ್ಚ್ 31 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಅಧಿಕೃತ ಸಂಸ್ಥೆಗಳು ಆಯೋಜಿಸುವ ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಸದರಿ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು.

 ರಾಷ್ಟಿçÃಯ ಖೆಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.

 ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಯೋಜನೆಯಡಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಲ್ಲಿ ಅಥವಾ ರಾಷ್ಟಿçÃಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. 

 ಒಬ್ಬ ಕ್ರೀಡಾಪಟು ಒಂದಕ್ಕಿAತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ಕ್ರೀಡಾ ವಿದ್ಯಾರ್ಥಿ ವೇತನ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ ಹಾಗೂ ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ.10,000/-ಗಳನ್ನು ಮಾತ್ರ ಮಂಜೂರು ಮಾಡಲಾಗುವುದು.

 ¬ ಹೆಚ್ಚಿನ ವಿವರಗಳಿಗೆ ಕಚೇರಿಯ ದೂರವಾಣಿ ಸಂಖ್ಯೆ 08172-296256 ರ ಮೂಲಕ ಸಂರ್ಪಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದೇಶಕರು ತಿಳಿಸಿದ್ದಾರೆ.

Post a Comment

Previous Post Next Post