ಹಾಸನ ಮೇ.೦೪:- ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಸನದಡಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಹೊಸದಾಗಿ ದಾಖಲಾಗುವ ಅಥವಾ ಸಂರಕ್ಷಿಸಲ್ಪಟ್ಟ ೧೮ ವರ್ಷದೊಳಗಿನ ಮಕ್ಕಳನ್ನು ನೇರವಾಗಿ ಸಂಸ್ಥೆಗೆ ದಾಖಲಿಸದೇ ಕೋವಿಡ್-೧೯ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲು ಜಿಲ್ಲಾಧಿಕಾರಿಗಳಿಂದ ಆದೇಶ ಪಡೆದು
ಬಾಲಕಿಯರಿಗಾಗಿ ನಗರದ ಕೃಷ್ಣ ಅಂಧ ಮಕ್ಕಳ ಕೇಂದ್ರದ ಬಳಿ ಇರುವ ಹಿಂದುಳಿದ ವರ್ಗಗಳ ಇಲಾಖೆಯ ಮೆಟ್ರಿಕ್ ಪೂರ್ವ
ಬಾಲಕಿಯರ ವಿದ್ಯಾರ್ಥಿ ನಿಲಯ, ಹಾಗೂ ಬಾಲಕರಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು, ಕ್ವಾರಂಟೈನ್ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
Tags
ಹಾಸನ